Recent Posts

Friday, November 22, 2024
ಕ್ರೈಮ್ಬೆಂಗಳೂರುರಾಜ್ಯಸುದ್ದಿ

Breaking News : ಬೆಂಗಳೂರಿನಲ್ಲಿ ಗಲಭೆ ನಿರತ ಜಿಹಾದಿ ಪುಂಡರ ನಿಯಂತ್ರಣಕ್ಕೆ ಪೊಲೀಸ್ ಗೋಲೀಬಾರ್ : ಇಬ್ಬರು ಬಲಿ, ಐವರು ಗಂಭೀರ..! – ನೂರಕ್ಕೂ ಅಧಿಕ ಶಾಂತಿ ದೂತರು ಅಂದರ್ – ಕಹಳೆ ನ್ಯೂಸ್

ಬೆಂಗಳೂರು, ಆ.12 : ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆ ವೇಳೆ ಇಬ್ಬರು ಗುಂಡು ತಗುಲಿ ಬಲಿಯಾಗಿದ್ದಾರೆ. ಐವರ ಸ್ಥಿತಿ ಗಂಭೀರ ವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಕ್ಕೂ ಅಧಿಕ ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ.

ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ನಿರ್ಧಾಕ್ಷಿಣ್ಯ ಕ್ರಮ‌ಕೈಗೊಳ್ಳಿ ಎಂದು ಖಡಕ್ ಆದೇಶ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕರ ತಂಗಿ ಮಗ ನವೀನ್ ಬಂಧಿತ ವ್ಯಕ್ತಿ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಕಾಂಗ್ರೆಸ್ ಮುಖಂಡ ಜಮೀರ್ ಗೂ ಗಾಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 150 ಕ್ಕೂ ಹೆಚ್ಚು ಸುತ್ತು ಗುಂಡು ಪೊಲೀಸರು ಹಾರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೈಗಂಬರ್ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ, ಈ ಕಾರಣಕ್ಕೆ ದಾಂಧಲೆ ನಡೆಸಿ, ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿ ನಡೆದಿತ್ತು. ಮಹಮ್ಮದ್ ಪೈಗಂಬರ್ ರ ಬಗ್ಗೆ ಶಾಸಕರ ಸಂಬಂಧಿ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಘೋಷಣೆ ಕೂಗುತ್ತಾ ಉದ್ರಿಕ್ತ ಗುಂಪೊಂದು ರಸ್ತೆಯಲ್ಲಿರುವ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಬೆಂಗಳೂರಿನ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮೇಲೆ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಅಲ್ಲದೇ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ. ಜಿ ಹಳ್ಳಿ ಠಾಣೆ ಮುಂದೆ ಉದ್ರಿಕ್ತ ಜನರ ಗುಂಪು ಜಮಾಯಿಸಿದೆ. ಶಾಸಕರ ಮನೆಗೆ ಮಾತ್ರವಲ್ಲದೆ ಅವರ ಸಂಬಂಧಿಯ ಮನೆಗೂ ಕಿಡಿಗೇಡಿಗಳು ಬೆಂಕಿಯನ್ನು ಹಚ್ಚಿದ್ದರು. ದಕ್ಷಿಣ ವಲಯ ಡಿಸಿಪಿ ವಾಹನವೂ ಜಖಂ ಗೊಂಡಿದೆ. ವರದಿಗೆ ತೆರಳಿದ ಮಾಧ್ಯಮ ಪ್ರತಿನಿಧಿಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ.

ಬೆಂಗಳೂರು ಕಮೀಷನರ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಶಾಸಕ ಜಮೀರ್ ಅಹಮ್ಮದ್ ಕೂಡ ಸ್ಥಳಕ್ಕೆ ಆಗಮಿಸಿದ್ದು ಸಂಧಾನ ಪ್ರಕ್ರಿಯೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಆದರೆ, ಉದ್ರಿಕ್ತ ಮುಸ್ಲಿಂ ಯುವಕ ಅಟ್ಟಹಾಸಕ್ಕೆ ಕೊನೆಗೂ ಬ್ರೇಕ್ ಬಿದ್ದಿದ್ದು, ಸಂಪೂರ್ಣ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ, ಗಲಭೆಕೋರರ ಹೆಡೆಮುರಿಕಟ್ಟಲು‌ ಖಡಕ್ ಸೂಚನೆ ನೀಡಿದ್ದಾರೆ.