Recent Posts

Sunday, January 19, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

” ಲೋಕಕ್ಕೆ ಸೌಹಾರ್ದತೆ,ಸಮಾನತೆ ಹಾಗೂ ಮಾನವೀಯತೆ ಸಾರಿದ ವಿಶ್ವ ಪ್ರವಾದಿ ಮೊಹಮ್ಮದ್ (ಸ.ಅ) ರವರನ್ನು ನಿಂದನೆ ಮಾಡಿದವರ ವಿರುದ್ದ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಆದರೆ ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಮಾಡುವುದನ್ನ ಒಪ್ಪುವುದು ಸಾಧ್ಯವೇ ಇಲ್ಲ.ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದಿದ್ದಾರೆ.

ಮತ್ತೊಂದುದು ಟ್ವೀಟ್ ನಲ್ಲಿ , ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.