Friday, April 11, 2025
ರಾಜ್ಯ

ನಾನು ಹುಟ್ಟಿ ಬೆಳೆದ ಮನೆಯನ್ನು ಸುಟ್ಟು‌ ಹಾಕಿದ್ದಾರೆ.. ಗಲಭೆಕೋರರಿಗೆ ಕಠಿಣ ಶಿಕ್ಷೆ ಆಗಲೇ ಬೇಕು: ಶಾಸಕ ಅಖಂಡ ಶ್ರೀನಿವಾಸಮೂರ್ತಿ-ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಮನೆ ಮೇಲೆ ಸುಮಾರು ನಾಲ್ಕು ಸಾವಿರ ಜನ ದಾಳಿ ಮಾಡಿದ್ದಾರೆ. ಮಾರಕಾಸ್ತ್ರ, ಪೆಟ್ರೋಲ್ ‌ಬಾಂಬ್ ಬಳಸಿ ಮನೆಗೆ ಬೆಂಕಿ ಹಚ್ಚುವ ಕೃತ್ಯ ಮಾಡಿದ್ದಾರೆ. ಘಟನೆಗೆ ಕಾರಣರಾದವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ.

ಡಿಜೆ ಹಳ್ಳಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ಸಂಭವಿಸಿದ ದಾಂಧಲೆಯಲ್ಲಿ ವಾಸವಿದ್ದ ಮನೆಯನ್ನೆ ಕಳೆದುಕೊಂಡ ಶಾಸಕರು ಈ ಬಗ್ಗೆ ಇಂದು ಮಧ್ಯಾಹ್ನ (ಬುಧವಾರ) ವಿಧಾನಸೌಧದಲ್ಲಿ ಮಾತನಾಡಿದರು. ನಾನು ಹುಟ್ಟಿ ಬೆಳೆದ ಮನೆ ಸುಟ್ಟು‌ ಹಾಕಿದ್ದಾರೆ ಎಂದು ಭಾವುಕರಾದ ಅಖಂಡ ಶ್ರೀನಿವಾಸ್, ಕಳೆದ 25 ವರ್ಷದಿಂದ ಇಂತಹ ಘಟನೆ ನಡೆದಿರಲಿಲ್ಲ. ಇದರ ಹಿಂದೆ ಯಾರೇ ಇದ್ದರೂ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಮ್ಮ ಮನೆಯಲ್ಲಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಸಚಿವ ಅಶೋಕ್ ಮನೆಗೆ ಬಂದು ನಮಗೆ ಧೈರ್ಯ ಹೇಳಿದ್ದಾರೆ. ನಮಗೆ ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಘಟನೆ ಬಗ್ಗೆ ಸಿಬಿಐ, ಸಿಐಡಿ ಸೇರಿದಂತೆ ಯಾವುದೇ ತನಿಖೆ ನಡೆಸಲಿ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು. ನನಗೆ ನನ್ನ ಕುಟುಂಬಕ್ಕೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ನವೀನ್ ನನ್ನ ಅಕ್ಕನ ಮಗ. ಅವನಿಗೂ ನಮಗೂ ಯಾವುದೇ ಸಂಪರ್ಕವಿಲ್ಲ. ಘಟನೆಯ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ