Monday, April 7, 2025
ರಾಜ್ಯಸುದ್ದಿ

Breaking News : ಖ್ಯಾತ ಗಾಯಕ ಎಸ್​ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಚೆನ್ನೈ: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್​ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಎಮ್​ಜಿಎಮ್​ ಆಸ್ಪತ್ರೆ ತನ್ನ ಬುಲೆಟಿನ್​ನಲ್ಲಿ ಮಾಹಿತಿ ನೀಡಿದೆ.

ಬಾಲಸುಬ್ರಮಣ್ಯಂ ಆಗಸ್ಟ್​ 5 ರಂದು ಆಸ್ಪತ್ರೆಗೆ ದಾಖಲಾಗಿದ್ದು ನಿನ್ನೆ ತಡರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಚಿಕಿತ್ಸೆ ನೋಡಿಕೊಳ್ಳುತ್ತಿರುವ ವೈದ್ಯರ ಅಭಿಪ್ರಾಯದಂತೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಸದ್ಯ ಬಾಲಸುಬ್ರಮಣ್ಯಂ ಅವರು ಕೃತಕ ಆಕ್ಸಿಜನ್ ಮೂಲಕ ಉಸಿರಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಆರೋಗ್ಯದ ಬಗ್ಗೆ ತಜ್ಞವೈದ್ಯರು ತೀವ್ರ ನಿಗಾ ವಹಿಸಿದ್ದು ರಕ್ತ ಸಂಚಾರದ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಆಸ್ಪತ್ರೆ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ