Recent Posts

Monday, January 20, 2025
ಪುತ್ತೂರು

ಪುತ್ತೂರು: ಶಾಸಕರ ನೇತೃತ್ವದಲ್ಲಿ ತಾಲೂಕು ಕಚೇರಿಯಲ್ಲಿ ೭೪ನೇ ಸ್ವಾತಂತ್ರ‍್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ರಾಷ್ಟ್ರದ ೭೪ನೇಯ ಸ್ವಾತಂತ್ರ್ಯೋತ್ಸವವನ್ನು ಇಂದು ತಾಲೂಕು ಕಚೇರಿಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಕೊರೋನಾ ವಾರಿಯರ್ಸ್ ತಂಡದವರಿಗೆ ಹಾಗೂ ಕೋವಿಡ್-19 ಸೋಂಕಿನಿಂದ ಗುಣಮುಖರಾದ 80 ವರ್ಷ ಹರೆಯದ ವೃದ್ಧೆಗೆ ಅಭಿನಂದನೆಯನ್ನು ಶಾಸಕರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭಾ ಕಾರ್ಯಕ್ರಮದಲ್ಲಿ:-

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಡಾ.ಯತೀಶ್ ಉಳ್ಳಾಲ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ತಹಶೀಲ್ದಾರ್ ಶ್ರೀ ರಮೇಶ್ ಬಾಬು, ನಗರ ಸಭಾ ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ಡಿವೈಎಸ್ಪಿ ಶ್ರೀ ದಿನಕರ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಲೋಕೇಶ್ ಹಾಗೂ ತಾಲೂಕು ಕಚೇರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.