Recent Posts

Friday, November 22, 2024
ಪುತ್ತೂರುಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ಜನ್ಮ ದಿನದ ಅಂಗವಾಗಿ ಸದ್ಭಾವನಾ ದಿನಾಚರಣೆಯನ್ನು ಆನ್‍ಲೈನ್ ವೆಬಿನಾರ್ಮೂ ಲಕ ಆಗಸ್ಟ್ 20 ರಂದು ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ,ಯುವ ಸಮುದಾಯದಲ್ಲಿ ದೇಶ ಪ್ರೇಮವು ಜಾಗೃತಗೊಂಡು ಧನಾತ್ಮಕ ಚಿಂತನೆಗಳ ಮೂಲಕ ಸದ್ಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿ, ಶುಭ ಹಾರೈಸಿದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ್ ಮೊಳೆಯಾರ್ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ನಮ್ಮ ದೇಶವು ವಿವಿಧತೆಯಲ್ಲಿ ಏಕತೆಗೆ ವಿಶೇಷ ಮನ್ನಣೆಯನ್ನು ಹೊಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿವಿಧ ಜಾತಿ, ಮತ, ಭಾಷೆ, ಸಂಸ್ಕøತಿಯ ಜನರು ಏಕತೆಯಿಂದ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಈ ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯೂ ಧರ್ಮ ಸಾಮರಸ್ಯದಿಂದ ಜೀವಿಸುವ ಸಂಕಲ್ಪ ಕೈಗೊಂಡಾಗ ದೇಶವು ವಿಶ್ವ ಮಾನ್ಯತೆಯನ್ನು ಹೊಂದಲು ಸಾಧ್ಯ ಎಂದರು.

ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಶಶಿಪ್ರಭಾ ಸ್ವಾಗತಿಸಿ, ಸ್ವಯಂಸೇವಕಿ ಸಹನಾ ಪಿ ಜಿ ವಂದಿಸಿದರು. ಕಾರ್ಯಕ್ರಮಾಧಿಕಾರಿ ದಿನಕರ್ ಅಂಚನ್ ನಿರೂಪಿಸಿದರು.