Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ಗಣೇಶ ಹಬ್ಬದ ದಿನವೇ ಕರಾವಳಿಗೆ ಬಿಗ್ ಶಾಕ್ ಕೊಟ್ಟ ಕೊರೋನಾ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ – ಕಹಳೆ ನ್ಯೂಸ್

ಮಂಗಳೂರು, ಆ. 22  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 228 ಮಂದಿಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ.

ಇಂದು ದೃಢಪಟ್ಟ 228 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 10137 ಪ್ರಕರಣಗಳು ದಾಖಲಾಗಿದೆ. ಇಂದು ಮಂಗಳೂರಿನಲ್ಲಿ 150, ಬಂಟ್ವಾಳದಲ್ಲಿ 23, ಪುತ್ತೂರಿನಲ್ಲಿ 15, ಸುಳ್ಯದಲ್ಲಿ 8, ಬೆಳ್ತಂಗಡಿಯಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 25 ಮಂದಿಗೆ ಪಾಸಿಟಿವ್‌ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಜಿಲ್ಲೆಯಲ್ಲಿ ಇಂದು 320 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 7513 ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಜಿಲ್ಲೆಯಲ್ಲಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಇಬ್ಬರು ಮಂಗಳೂರಿನವರಾಗಿದ್ದು ಒಬ್ಬರು ಇತರೆ ಜಿಲ್ಲೆಯವರಾಗಿದ್ದಾರೆ. ಒಬ್ಬರು ಬಂಟ್ವಾಳ ತಾಲೂಕಿನವರಾಗಿದ್ದಾರೆ. ಈವರೆಗೆ 305 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೆಯೇ ಪ್ರಸ್ತುತ 2319 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ 102 ಐಎಲ್‌ಎ, 13 ಎಸ್‌ಎಆರ್‌ಐ ಪ್ರಕರಣಗಳಾಗಿದ್ದು 17 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಇನ್ನು 90 ಮಂದಿಗೆ ಸೋಂಕು ತಗುಲಿರುವ ಸಂಪರ್ಕದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಇಬ್ಬರಿಗೆ ಸ್ಥಳೀಯ ಪ್ರಯಾಣದ ಇತಿಹಾಸವಿದ್ದು, ನಾಲ್ವರು ವಿದೇಶದಿಂದ ಬಂದವರಾಗಿದ್ದಾರೆ.

ಇನ್ನು ಇಂದು ದೃಢಪಟ್ಟ 228 ಸೋಂಕಿತರ ಪೈಕಿ 121 ಯಲ್ಲಿ ರೋಗದ ಗುಣಲಕ್ಷಣಗಳಿದ್ದು 107 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ.