Recent Posts

Friday, November 22, 2024
ರಾಜ್ಯ

ಡಿಸೆಂಬರ್ ಅಂತ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ..? -ಕಹಳೆ ನ್ಯೂಸ್

ಬೆಂಗಳೂರು,ಆ.27- ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿಗಳಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಆಯೋಗ ಚುನಾವಣೆ ನಡೆಸಲು ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿಸೆಂಬರ್ ತಿಂಗಳ ಅಂತ್ಯಕ್ಕೆ ಕೋವಿಡ್-19 ನಿಯಂತ್ರಣಕ್ಕೆ ಬಂದರೆ ಆಯೋಗ ಚುನಾವಣೆ ನಡೆಸುವುದು ಬಹತೇಕ ಖಚಿತವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಇದು ಪ್ರತಿಷ್ಟೆಯ ಕಣವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷದ ಗುರುತಿನ ಮೇಲೆ ಸ್ರ್ಪಸುವಂತಿಲ್ಲ. ಆದರೆ, ಬಹುತೇಕ ಅಭ್ಯರ್ಥಿಗಳು ಒಂದಲ್ಲೊಂದು ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡವರೇ ಹೆಚ್ಚು.
ರಾಜ್ಯದಲ್ಲಿ 6025 ಗ್ರಾಮ ಪಂಚಾಯತ್ ಗಳಿದ್ದು, ಅವುಗಳ ಅವ ಜೂನ್/ ಜುಲೈ ತಿಂಗಳಿಗೆ ಅಂತ್ಯವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಸಾಧಾರಣ ಸಂದರ್ಭ ಎಂದು ಭಾವಿಸಿ ರಾಜ್ಯ ಚುನಾವಣಾ ಆಯೋಗ ಪಂಚಾಯತ್ ಚುನಾವಣೆಯನ್ನು ಮೇ ತಿಂಗಳಲ್ಲಿ ಮುಂದೂಡಿತ್ತು.

ಈ ಮಧ್ಯೆ ಚುನಾವಣೆ ಮುಂದೂಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆಗಾಗಿ 21 ಜಿಲ್ಲೆಗಳಲ್ಲಿ ಮೀಸಲಾತಿ ಪಟ್ಟಿ ಸಿದ್ಧವಾಗಿರುವುದಾಗಿ ರಾಜ್ಯ ಚುನಾವಣಾ ಆಯೋಗ ಇತ್ತೀಚಿಗೆ ಹೈಕೋರ್ಟ್ ಗೆ ಮಾಹಿತಿ ನೀಡಿತ್ತು. ಉಳಿದಿರುವ 9 ಜಿಲ್ಲೆಗಳ ಮೀಸಲಾತಿ ಪಟ್ಟಿಗಾಗಿ ಸಮಯವನ್ನು ಕೋರಿತ್ತು.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಚುನಾವಣೆ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಕೋವಿಡ್-19 ಸಂದರ್ಭದಲ್ಲಿ ಚುನಾವಣೆಗಾಗಿ ಚುನಾವಣಾ ಆಯೋಗ ಮಾರ್ಗಸೂಚಿಗಳನ್ನು ಹೊರಡಿಸಿದೆ.ಇದರ ಆಧಾರದ ಮೇಲೆ ಮಾರ್ಗಸೂಚಿಗಳನ್ನು ರಚಿಸುತ್ತೇವೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಹೆಸರು ಹೇಳಲು ಇಚ್ಛಿಸದ ಆಯೋಗದ ಹಿರಿಯ ಅಕಾರಿಯೊಬ್ಬರು ತಿಳಿಸಿದ್ದಾರೆ.

2015ರಲ್ಲಿ ರಾಜ್ಯದ 6024 ಗ್ರಾಮ ಪಂಚಾಯತಿಗಳ ಚುನಾವಣೆಯು ನಡೆದಿತ್ತು. ಈಗಾಗಲೇ ಬಹುಪಾಲು ಗ್ರಾಮ ಪಂಚಾಯತಿಗಳ ಸದಸ್ಯರ ಅಕಾರದ ಅವಯಲ್ಲಿ ಮುಕ್ತಯವಾಗಿದೆ.

ಗ್ರಾಮ ಪಂಚಾಯತಿಗಳಿಗೆ ಸದಸ್ಯರನ್ನು ಚುನಾಯಿಸುವುದು ಅಸಾಧ್ಯವಾದಾಗ ಅಥವಾ ನಿರಂತರವಾಗಿ ಎರಡು ಚುನಾವಣೆಗಳನ್ನು ನಡೆಸಿದರೂ ಸದಸ್ಯರನ್ನು ಆಯ್ಕೆ ಮಾಡಲು ಸಾಧ್ಯವಾಗದಿದ್ದಾಗ ರಾಜ್ಯ ಸರ್ಕಾರವು ಆಡಳಿತ ಸಮಿತಿಯನ್ನು ನೇಮಿಸಬಹುದಾಗಿದೆ.

ಪ್ರಸ್ತುತ ಇಂತಹ ಯಾವುದೇ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವವಾಗಿಲ್ಲ. ಹಾಗಾಗಿ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 8ರಂತೆ ಆಡಳಿತ ಸಮಿತಿಗಳನ್ನು ರಚಿಸಲು ಅವಕಾಶವಿಲ್ಲ.

ರಾಜ್ಯ ಚುನಾವಣಾ ಆಯೋಗವು ತನ್ನ ಸಾಂವಿಧಾನಿಕ ಜವಾಬ್ಧಾರಿಯನ್ನು ನ್ಯಾಯಬದ್ಧವಾಗಿ, ಪಕ್ಷತೀತವಾಗಿ ರಾಷ್ಟ್ರದ ಸಂವಿಧಾನ ಹಾಗೂ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ರಂತೆ ಚುನಾವಣೆ ನಡೆಸಲು ಆಯೋಗ ಮುಂದಾಗಿದೆ.

ರಾಜ್ಯ ಚುನಾವಣಾ ಆಯೋಗವು ರಾಜ್ಯದ ಗ್ರಾಮ ಪಂಚಾಯತಿಗಳಿಗೆ ನಿಗತ ಅವಯಲ್ಲಿ ಚುನಾವಣೆಗಳನ್ನು ನಡೆಸದೆ ಇರುವುದರಿಂದ ಗ್ರಾಮಗಳ ವಿಕೇಂದ್ರೀಕೃತ ಸ್ಥಳೀಯ ಸ್ವಯಂ ಆಡಳಿತ ವ್ಯವಸ್ಥೆಯನ್ನು ದಮನ ಮಾಡಿದಂತಾಗುತ್ತದೆ. ಇದರಿಂದ ಸಂವಿಧಾನದ 73 ನೇ ತಿದ್ದುಪಡಿಯ ಧ್ಯೇಯೋದ್ದೇಶಗಳನ್ನು ಉಲ್ಲಂಘಿಸಿದಂತಾಗುತ್ತದೆ.

ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ,1993 ರ ಸೆಕ್ಷನ್ 308ಎಎ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಗಳ ಹಾಲಿ ಅಕಾರಾವ ಮುಗಿಯುವ ಮೊದಲೆ ಚುನಾವಣಾ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಬೇಕಾಗಿದೆ.

ಇದಕ್ಕಾಗಿ ಚುನಾವಣಾ ವೇಳಾಪಟ್ಟಿ ಮತ್ತು ಮೀಸಲಾತಿಗಳ ವಿವರಗಳನ್ನು ಚುನಾವಣೆಗಳ ಅಸೂಚನೆ ಹೊರಡಿಸುವ 45 ದಿನಗಳ ಮೊದಲೇ ಹೊರಡಿಸಬೇಕಾಗುತ್ತದೆ.

ಆದರೆ ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳ ಅಕಾರಾವ ಮುಗಿದು ಹೋಗುತ್ತಿದ್ದರೂ ಕೂಡ ರಾಜ್ಯ ಚುನಾವಣಾ ಆಯೋಗವು ಮೀಸಲಾತಿಯ ನಿಗ, ವೇಳಾಪಟ್ಟಿಗಳ ಪ್ರಕಟ ಮುಂತಾದ ಯಾವುದೇ ಚುನಾವಣಾ ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವ ಕುರಿತು ಯಾವ ಮಾಹಿತಿಯೂ ಇಲ್ಲ. ಸೂಚನೆಯೂ ಇಲ್ಲ.

ಇದರಿಂದಾಗಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 308ಎಎ ಅನ್ನು ಉದ್ದೇಶ ಪೂರ್ವಕವಾಗಿ ಉಲ್ಲಂಘನೆ ಮಾಡಿದೆ ಮತ್ತು ಕಾಯ್ದೆಯ ಕುರಿತು ಸಂಪೂರ್ಣ ನಿರ್ಲಕ್ಷ್ಯ ತೋರಿದಂತಾಗುತ್ತದೆ ಎಂಬ ಆಪಾದನೆ ಕೇಳಿಬರುತ್ತದೆ.

ಸಂವಿಧಾನದ ಅನುಚ್ಛೇದ 243 ಇ3ರನ್ವಯ ಯಾವುದೇ ಪಂಚಾಯತಿಯ ಐದು ವರ್ಷಗಳ ಅಕಾರಾವ ಮುಕ್ತಾಯಗೊಳ್ಳುವ ಮೊದಲೇ ಚುನಾವಣೆಗಳನ್ನು ನಡೆಸಬೇಕೆಂಬ ಸ್ಪಷ್ಟ ನಿರ್ದೇಶನವಿದೆ. ಆದ ಕಾರಣ ನಿಗತ ಅವಯಲ್ಲಿ ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಕಡ್ಡಾಯ ಕರ್ತವ್ಯವಾಗಿರುತ್ತದೆ.

ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, 1993 ರ ನಿಯಮ 8ರಂತೆ ಜಿಲ್ಲಾಕಾರಿಗಳು ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದಿದ್ದಾಗ ಮತ್ತು ಎರಡು ಬಾರಿ ನಿರಂತರವಾಗಿ ಚುನಾವಣೆ ನಡೆಸಿದರೂ ಸದಸ್ಯರು ಆಯ್ಕೆಯಾಗದಿದ್ದಾಗ ಅಥವಾ ಇನ್ನಾವುದೇ ಸಮರ್ಥನೀಯವಾದ ಸ್ಪಷ್ಟ ಕಾರಣಗಳಿದ್ದರೆ ಮಾತ್ರ ಆಡಳಿತ ಸಮಿತಿಯನ್ನು ಅಸೂಚನೆ ಹೊರಡಿಸುವುದರ ಮೂಲಕ ರಚಿಸಬಹುದಾಗಿದೆ.

ಈ ಎಲ್ಲ ಸಾಧಕಬಾಧಕಗಳನ್ನು ಪರಿಗಣಿಸಿ ಆಯೋಗ ಡಿಸೆಂಬರ್‍ನಲ್ಲಿ ಚುನಾವಣೆಗೆ ಮುಹೂರ್ತ ನಿಗದಿ ಮಾಡುವುದು ಬಹುತೇಕ ನಿಶ್ಚಿತವಾಗಿದೆ.