Sunday, January 19, 2025
ಶಿಕ್ಷಣ

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಸೆ.5ರವರೆಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ – ಕಹಳೆ ನ್ಯೂಸ್

ಮಡಿಕೇರಿ : ಜಿಲ್ಲೆಯ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2020-21ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ವಸತಿ ಶಿಕ್ಷಣಗಳ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6 ನೇ ತರಗತಿಗೆ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಅರ್ಜಿ ಸಲ್ಲಿಸಲು ಆಗಸ್ಟ್, 25 ನಿಗಧಿಪಡಿಸಲಾಗಿತ್ತು, ಆದರೆ ದಿನಾಂಕವನ್ನು ಸೆಪ್ಟೆಂಬರ್, 05 ರವರೆಗೆ ವಿಸ್ತರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅರ್ಜಿ ಸಲ್ಲಿಸುವ ವಿಧಾನ ಹಾಗೂ “ಮಾಹಿತಿ ಪುಸ್ತಕ-2020” ವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ https://kreis.kar.nic.in ನಲ್ಲಿ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‍ಸೈಟ್ https://kea.kar.nic.in ನಲ್ಲಿ ನೋಡಬಹುದು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಆಯಾಯ ಜಿಲ್ಲಾ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ/ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಸೆಪ್ಟೆಂಬರ್, 05 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಕ್ವಾರಂಟೈನ್ ಸೆಂಟರ್/ಕೊವಿಡ್ ಕೇರ್ ಸೆಂಟರ್‍ಗಾಗಿ ಬಳಸಲಾಗುತ್ತಿರುವ ವಸತಿ ಶಾಲೆಗಳ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆಗಳಲ್ಲಿ ಹಾಗೂ ಸಂಬಂಧಪಟ್ಟ ಪ್ರಾಂಶುಪಾಲರನ್ನು ಸಂಪರ್ಕಿಸಿ. ಸಾಮಾಜಿಕ ಅಂತರ ಕಾಪಾಡಿಕೊಂಡು, ಮುಖ ಕವಚವನ್ನು ಧರಿಸಿಕೊಂಡು ಬರಲು ಸೂಚಿಸಿದೆ. ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ತಿಳಿಸಿದ್ದಾರೆ.