Sunday, January 19, 2025
ಹೆಚ್ಚಿನ ಸುದ್ದಿ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಾವಿಗೇನು ಕಾರಣ? – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್.28: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಆಗಸ್ಟ್ ತಿಂಗಳ ಕಳೆದ 25 ದಿನಗಳಲ್ಲಿ ಕೊವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಶೇ.56 ಜನರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂವರು ಕೊರೊನಾವೈರಸ್ ಸೋಂಕಿತರ ಪೈಕಿ ಒಬ್ಬರು ಆಸ್ಪತ್ರೆಗೆ ದಾಖಲಾದ ದಿನ ಅಥವಾ ಆಸ್ಪತ್ರೆಗೆ ದಾಖಲಾದ ಮರುದಿನವೂ ಪ್ರಾಣ ಬಿಟ್ಟಿರುವ ಪ್ರಕರಣಗಳು ಪತ್ತೆಯಾಗಿವೆ. ಇನ್ನು, ಶೇ.4.5ರಷ್ಟು ಸೋಂಕಿತರು ಮನೆಗಳಲ್ಲೇ ಅಥವಾ ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಮಹಾಮಾರಿಗೆ ಬಲಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊವಿಡ್-19ನಿಂದ ಪ್ರಾಣ ಬಿಟ್ಟ 100ರಲ್ಲಿ 89 ಜನ ಈ ರಾಜ್ಯದವರು!

ಕೊರೊನಾವೈರಸ್ ಸೋಂಕಿಗೆ ಪೂರ್ವಭಾವಿ ಚಿಕಿತ್ಸೆ ಪಡೆದುಕೊಂಡಲ್ಲಿ ಸಾವಿನ ಪ್ರಮಾಣವನ್ನು ಶೇ.2ಕ್ಕಿಂತ ಕಡಿಮೆಗೊಳಿಸಲು ಸಾಧ್ಯವಾಗುತ್ತದೆ ಎಂದು ವೈದ್ಯರು ಮತ್ತು ಸಾಂಕ್ರಾಮಿಕ ರೋಗತಜ್ಞರು ತಿಳಿಸಿದ್ದಾರೆ. ಇನ್ನು, ಸೋಂಕು ಗಂಭೀರ ಸ್ವರೂಪಕ್ಕೆ ತಿರುವ ಮೊದಲೇ ಹಲವು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕೊವಿಡ್-19 ಆರಂಭಿಕ ಹಂತದಲ್ಲಿ ನಿರ್ಲಕ್ಷ್ಯ:

ಕೊರೊನಾವೈರಸ್ ಸೋಂಕಿನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡಾಗ ಸಾರ್ವಜನಿಕರು ತೀವ್ರ ನಿರ್ಲಕ್ಷ್ಯ ವಹಿಸಿದ್ದರು. ಸೋಂಕು ಶ್ವಾಸಕೋಶ ಪ್ರವೇಶಿಸಿದ ನಂತರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜನರು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಅದರ ಬದಲಾಗಿ ಮೊದಲೇ ವೈದ್ಯರ ಬಳಿಗೆ ತೆರಳಿದ್ದಲ್ಲಿ ಆರೋಗ್ಯ ಸ್ಥಿತಿಯ ಬಗ್ಗೆ ಗಮನ ಹರಿಸಲು ಸಾಧ್ಯವಾಗುತ್ತದೆ. ಕ್ಷ-ಕಿರಣ ಪರೀಕ್ಷೆ, ರಕ್ತ ಪರೀಕ್ಷೆಯ ಮೂಲಕ ತಪಾಸಣೆ ಸುಲಭವಾಗುತ್ತದೆ. ಶ್ವಾಸಕೋಶಕ್ಕೆ ಕೊವಿಡ್-19 ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಸೋಂಕಿತರನ್ನು ಸಾವಿನ ದವಡೆಯಿಂದ ಪಾರು ಮಾಡುವುದಕ್ಕೂ ಸಾಧ್ಯವಾಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ.

ಕೊವಿಡ್-19 ಸೋಂಕಿತರು ಆಸ್ಪತ್ರೆಗೆ ದಾಖಲಾಗುವುದಕ್ಕೆ ಹಿಂದೇಟು ಹಾಕುತ್ತಿರುವುದು ಮತ್ತು ಚಿಕಿತ್ಸೆಗೆ ತಡವಾಗಿ ಆಗಮಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಮಹಾಮಾರಿಯ ಬಗ್ಗೆ ಸಾರ್ವಜನಿಕರು ಭಯ ಮತ್ತು ಆತಂಕವನ್ನು ಬಿಡಬೇಕು. ಸರ್ಕಾರವು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ವೈದ್ಯರು ತಿಳಿಸುತ್ತಾರೆ.