ಶ್ರೀನಗರ: ಇಂದು ನಸುಕಿನಲ್ಲಿಯೇ ಜಮ್ಮು ಕಾಶ್ಮೀರದ ಪಂಥಾ ಚೌಕ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಆದರೆ ಈ ಚಕಮಕಿಯಲ್ಲಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.
ಕಣಿವೆಯಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಅಟ್ಟಾಡಿಸಿ ಹೊಡೆಯುತ್ತಿರುವ ಭದ್ರತಾ ಪಡೆಗಳು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡುವ ಸಂಬಂಧ ತೆಗೆದುಕೊಂಡಿರುವ ನಿರ್ಧಾರ ಹಂತಹಂತವಾಗಿ ನೆರವೇರುತ್ತಿದೆ.
ವಿಶ್ವದ ಹಿರಿಯ ಜೀವಿತ ವಿವಾಹಿತರಿವರು- ಗುಟ್ಟಾಗಿ ಮದುವೆಯಾಗಿದ್ದ ಇವರ ಹೆಸರೀಗ ವಿಶ್ವದಾಖಲೆ
ನಿನ್ನೆ ತಡರಾತ್ರಿಯಿಂದ ಭದ್ರತಾ ಪಡೆಗಳು ಉಗ್ರರ ವಿರುದ್ಧ ಎನ್‌ಕೌಂಟರ್ ಆರಂಭಿಸಿದ್ದವು. ಇಂದು(ಭಾನುವಾರ) ಬೆಳಗಿನ ಜಾವ ಮೂವರೂ ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಪೊಲೀಸರು ಮತ್ತು ಸಿಆರ್ ಪಿಎಫ್ ಯೋಧರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಮೂವರನ್ನು ಹೊಡೆದುರುಳಿಸಿದ್ದಾರೆ. ಸದ್ಯ ಹೆಚ್ಚುವರಿ ಪಡೆ ಸ್ಥಳಕ್ಕೆ ಆಗಮಿಸಿ ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಶ್ರೀನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ನಾಕಾಬಂದಿ ನಡೆಸುತ್ತಿದ್ದ ಪೊಲೀಸರು ಮತ್ತು ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ಆರಂಭಿಸಿದರು. ಕೂಡಲೇ ಪ್ರದೇಶವನ್ನು ಸುತ್ತುವರಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಮತ್ತೆ ಉಗ್ರರು ದಾಳಿ ಆರಂಭಿಸಿದರು. ಅದಕ್ಕೆ ದಿಟ್ಟ ಉತ್ತರ ನೀಡಿದ ಪೊಲೀಸರು ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿದಿದ್ದಾರೆ.