Recent Posts

Sunday, January 19, 2025
ಸುದ್ದಿ

ಅಷ್ಟಮಠದಲ್ಲಿರುವ ಎಲ್ಲಾ ಸ್ವಾಮೀಜಿಗಳಿಗೂ ಮಕ್ಕಳಿದ್ದಾರೆ. ನನಗೂ ಮಕ್ಕಳಿದ್ದಾರೆ ; ಇದೊಂದು ಫೇಕ್ ಆಡಿಯೋ – ಶೀರೂರು ಶ್ರೀ

shiruru swamiji

ಉಡುಪಿ : ಶೀರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ದ್ವನಿ ಎನ್ನಲಾದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಆಡೀಯೋದಲ್ಲಿ ಕೃಷ್ಣಮಠದ ಅಷ್ಟಮಠದಲ್ಲಿರುವ ಎಲ್ಲಾ ಸ್ವಾಮೀಜಿಗಳಿಗೂ ಮಕ್ಕಳಿದ್ದಾರೆ. ನನಗೂ ಮಕ್ಕಳಿದ್ದಾರೆ ಎಂದು ಶೀರೂರು ಶ್ರೀಗಳು ಹೇಳಿದ್ದಾರೆ ಎನ್ನಲಾಗಿದೆ. ಆದರೆ ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಗಳು, ಇದೊಂದು ಫೇಕ್ ಆಡಿಯೋ ಆಗಿದೆ. ಡಬ್ಬಿಂಗ್ ಮಾಡಿ ಹರಿಯಬಿಡಲಾಗಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಇದು ನಕಲಿ ಆಡಿಯೋ. ಈ ಬಗ್ಗೆ ಕೋರ್ಟ್ ನಲ್ಲಿ ಕೇಸ್ ಇದೆ. ನಾನು ರಾಜಕೀಯಕ್ಕೆ ಹೋಗೋದು ಸಹಿಸಲಾಗದೆ ಈ ರೀತಿ ಮಾಡಲಾಗುತ್ತಿದೆ. ವೈಜ್ಞಾನಿಕ ಯುಗದಲ್ಲಿ ಏನನ್ನೂ ಮಾಡಲು ಸಾಧ್ಯವಿದೆ. ಹೀಗಾಗಿ ಇಂತಹ ಅಪಪ್ರಚಾರಗಳು ಸ್ವಾಭಾವಿಕ, ಮುಂದೆ ಇನ್ನಷ್ಟು ಬರಬಹುದು. ಗುಂಡು ಹೊಡೆದರೂ ನಾನು ಸಾಯುವುದಿಲ್ಲ. ನಾನು ಎಲೆಕ್ಷನ್ ಗೆ ನಿಲ್ಲುತ್ತೇನೆ. ಇದರಿಂದ ಹಿಂದೇ ಸರಿಯೋದಿಲ್ಲ ಅಂತ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು