ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿಯಿಂದಲೇ ಅವರ ಆರೋಗ್ಯ ಹದಗೆಟ್ಟಿತ್ತು. ಶ್ವಾಸಕೋಶದ ಸೋಂಕು ಉಲ್ಬಣಗೊಂಡು ಸೆಪ್ಟಿಕ್ ಆಗಿತ್ತು ಎಂದು ಇಂದು ಬೆಳಗ್ಗೆಯಷ್ಟೇ ಆರ್ಮಿ ಆಸ್ಪತ್ರೆ ಮಾಹಿತಿ ನೀಡಿತ್ತು.
ಮಿದುಳು ಸರ್ಜರಿಗಾಗಿ ದೆಹಲಿ ಆರ್ಮಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ನಂತರ ಸಂಪೂರ್ಣ ಕೋಮಾಕ್ಕೆ ಜಾರಿದ್ದರು. ಅವರಲ್ಲಿ ಕೊವಿಡ್-19 ಸೋಂಕು ಕೂಡ ಕಾಣಿಸಿಕೊಂಡಿತ್ತು. ಅವರನ್ನು ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.