Recent Posts

Monday, April 14, 2025
ರಾಷ್ಟ್ರೀಯ

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ – ಕಹಳೆ ನ್ಯೂಸ್

ನವದೆಹಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಸಮರ್ಪಿಸಲಾಯಿತು.

ಇದಕ್ಕೂ ಮುನ್ನ ರಾಜಾಜಿ ರಸ್ತೆಯಲ್ಲಿರುವ ಅವ ಮನೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಆರು ಅಡಿ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಕಡ್ಡಾಯಪಡಿಸಲಾಗಿತ್ತು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ