Recent Posts

Monday, January 20, 2025
ಸುದ್ದಿ

ಇಂದಿನಿಂದ ಚಾರ್ಮಾಡಿ ಘಾಟಿಯಲ್ಲಿ 24 ಗಂಟೆ ಲಘು ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಡಿಸಿ ಆದೇಶ -ಕಹಳೆ ನ್ಯೂಸ್

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರದಿಂದ ದಿನದ ಇಪ್ಪತ್ತನಾಲ್ಕು ಗಂಟೆಯೂ ಲಘು ವಾಹನಗಳ ಜೊತೆ ಕೆ.ಎಸ್.ಆರ್.ಟಿ.ಸಿ. ಮಿನಿ ಬಸ್ ಗಳಿಗೂ ಅವಕಾಶ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಸ್ಪಷ್ಟನೆ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಈ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಮಾತ್ರ ಅವಕಾಶ ನೀಡಲಾಗಿತ್ತು ಆದರೆ ಇಂದು ಜಿಲ್ಲಾಧಿಕಾರಿಗಳು ದಿನದ ಇಪ್ಪತ್ತನಾಲ್ಕು ಗಂಟೆಯೂ ಲಘು ವಾಹನ ಸಂಚಾರಕ್ಕೆ ಅನುಮತಿಯನ್ನು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸಂಚಾರ ನಡೆಸುತ್ತಿತ್ತು ಆದರೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸದ್ಯ ಮಳೆ ಪ್ರಮಾಣ ಕಡಿಮೆಯಾದ ಪರಿಣಾಮ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು.