Sunday, January 19, 2025
ಸಿನಿಮಾ

ಇಲ್ಲಿದೆ ರಕ್ಷಿತ್ ಶೆಟ್ಟಿ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಮಾಹಿತಿ – ಕಹಳೆ ನ್ಯೂಸ್

Rakshith_Shetty

ಸ್ಯಾಂಡಲ್ ವುಡ್ ನಲ್ಲಿ ಭಾರೀ ಕುತೂಹಲ ಮೂಡಿಸಿರುವ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಮುಹೂರ್ತ ಮಾರ್ಚ್ 15 ರಂದು ನೆರವೇರಲಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಅದ್ಧೂರಿ ವೆಚ್ಚದಲ್ಲಿ ವಿಶೇಷವಾಗಿ ನಿರ್ಮಿಸಿದ ಸೆಟ್ ಗಳಲ್ಲಿ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಶೂಟಿಂಗ್ ನಡೆಸಲು ಪ್ಲಾನ್ ಮಾಡಲಾಗಿದೆ. ಚಿತ್ರಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವಿಶೇಷವಾದ ಸೆಟ್ ಗಳನ್ನು ನಿರ್ಮಿಸಲಾಗ್ತಿದೆ. ಇದರೊಂದಿಗೆ ಬಾಗಲಕೋಟೆ ಜಿಲ್ಲೆಯಲ್ಲಿಯೂ ಚಿತ್ರೀಕರಣ ನಡೆಸಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು
Rakshith_Shetty
Rakshith_Shetty

ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದಲ್ಲಿ, ಸಚಿನ್ ರವಿ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಶಾನ್ವಿ ಶ್ರೀವಾತ್ಸವ್, ಅಚ್ಯುತ್ ಕುಮಾರ್, ಬಾಲಾಜಿ ಮನೋಹರ್ ಮೊದಲಾದವರು ಅಭಿನಯಿಸಲಿದ್ದಾರೆ. 80 ರ ದಶಕದ ಕಥಾಹಂದರವನ್ನು ಚಿತ್ರ ಹೊಂದಿದ್ದು, ಅದಕ್ಕೆ ತಕ್ಕಂತೆ ಸೆಟ್ ಹಾಕಲಾಗ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು