Sunday, January 19, 2025
ಬೆಂಗಳೂರು

ಡ್ರಗ್ಸ್ ಕೇಸ್: ತಡರಾತ್ರಿ ಕಾರ್ಯಾಚರಣೆ – ರಾಗಿಣಿ ಆಯ್ತು, ಮತ್ತೊಬ್ಬ ಖ್ಯಾತ ನಟಿ ಸಂಜನಾ ಆಪ್ತ ಕೂಡ ಸಿಸಿಬಿ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ಸಂಜನಾ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ ಸಮೇತ ಮಧ್ಯರಾತ್ರಿ 3 ಗಂಟೆಗೆ ರಾಹುಲ್ ನನ್ನು ವಶಕ್ಕೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೆಲೆಬ್ರಿಟಿಗಳ ಪಾರ್ಟಿಗಳಿಗೆ ರಾಹುಲ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ರಾಗಿಣಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಜನಾಗೂ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ.