Sunday, January 19, 2025
ಪುತ್ತೂರುಬೆಳ್ತಂಗಡಿ

ಬಂಟ್ವಾಳ: ದೈಕಿನಕಟ್ಟೆಯ ಪೆಟ್ರೋಲ್ ಬಂಕ್ ನಲ್ಲಿ ದರೋಡೆ, 70 ಸಾವಿರ ರೂ. ಲೂಟಿ – ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ರಸ್ತೆಯ ದೈಕಿನಕಟ್ಟೆಯಲ್ಲಿರುವ ಧರ್ಮಶ್ರೀ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಕ್ ನಲ್ಲಿ ಕಳ್ಳರು ಶಟರ್ ನ ಬೀಗ ಮುರಿದು ಗಾಜು ಒಡೆದು ಒಳನುಗ್ಗಿದ್ದು, ಸುಮಾರು 70 ಸಾವಿರ ರೂ. ನಗದು ದೋಚಿದ್ದಾರೆ. ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ.ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಸೌಮ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.