Recent Posts

Friday, November 22, 2024
ರಾಜ್ಯಶಿಕ್ಷಣ

ಸೆಪ್ಟೆಂಬರ್ 7ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ: ಅಗತ್ಯ ಸಿದ್ದತೆಗೆ ಎಡಿಸಿ ಸೂಚನೆ – ಕಹಳೆ ನ್ಯೂಸ್

ರಾಯಚೂರು : ಇದೇ ಮಾಹೆಯ 7ರಿಂದ 19ರ ವರೆಗೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿದ್ದು, ಶಾಂತಿ ಹಾಗೂ ಸುವ್ಯಸ್ಥೆಯಿಂದ ಈ ಪರೀಕ್ಷೆಗಳು ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುವಾರ ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಿದ್ದತೆಗಳ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಪೂರಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಸ್ಥೆಗಳು, ಲೋಪಗಳು ಎದುರಾಗಬಾರದು, ಕೋವಿಡ್-೧೯ ಸೋಂಕು ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ಅತ್ಯಂತ ಪ್ರಮುಖ, ಈ ದಿಸೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು, ಮಾಸ್ಕ್ ವಿತರಿಸಬೇಕು, ಪರೀಕ್ಷಾ ಕೇಂದ್ರದ ಆವರಣ ಮತ್ತು ಕೊಠಡಿಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮುಖ್ಯವಾಗಿ ಪರೀಕ್ಷೆಯಲ್ಲಿ ನಕಲು ನಡೆಯದಂತೆ ಎಚ್ಚರ ವಹಿಸಬೇಕು, ಪರೀಕ್ಷಾ ಕೇಂದ್ರಗಳ ಸುತ್ತಲೂ ಸೂಕ್ತ ಬಂದೋಬಸ್ತ್ ಒದಗಿಸುವ ಮೂಲಕ ಮಕ್ಕಳು ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪರೀಕ್ಷೆಗೆ ಹಾಜರಾಗುವ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷೆ ಮುನ್ನ ಹಾಗೂ ನಂತರ ವಿದ್ಯಾರ್ಥಿಗಳ ಗುಂಪುಗೂಡುವಿಕೆ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಗೋಡೆ ಗಡಿಯಾರದ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಬೇಕೆಂದರು.
ಪರೀಕ್ಷಾ ಕೇಂದ್ರಗಳ ಸುತ್ತ ೧೪೪ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು, ಅದರಿಂದಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಕೆಫ್‌ಗಳನ್ನು ಬಂದ್ ಮಾಡಬೇಕು, ಪರೀಕ್ಷೆ ಕೇಂದ್ರಗಳ ನಿಗಾವಹಿಸಲು ರಾಯಚೂರು ಹಾಗೂ ಲಿಂಗಸೂಗೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕೆಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸದಾಶಿವಪ್ಪ, ತಹಶೀಲ್ದಾರ ಡಾ.ಹಂಪಣ್ಣ, ಲಿಂಗಸೂಗೂರು ತಹಶೀಲ್ದಾರ ಚಾಮರಜ್ ಪಾಟೀಲ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಇಂದಿರಾ, ಚಂದ್ರಶೇಖರ್ ದೊಡ್ಡಮನಿ ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾಪಟ್ಟಿ :

ಸೆ.7ರ ಬೆಳಗ್ಗೆ ಉರ್ದು, ಸಂಸ್ಕೃತ, ಮಧ್ಯಾಹ್ನ ಇನ್ಫಾರ್ಮೇಷನ್ ಟೆಕ್ನಾಲಜಿ, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್‌ನೆಸ್, ಹೋಮ್ ಸೈನ್ಸ್,
ಸೆ.8ರ ಬೆಳಗ್ಗೆ ಇತಿಹಾಸ, ಸ್ಟ್ಯಾಟಿಸ್ಟಿಕ್ಸ್, ಜೀವಶಾಸ್ತ,
ಸೆ.9ರ ಬೆಳಗ್ಗೆ ಹಿಂದಿ, ಮಧ್ಯಾಹ್ನ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಪ್ರೆಂಚ್,
ಸೆ.10ರ ಬೆಳಗ್ಗೆ ಇಂಗ್ಲೀಷ್,
ಸೆ.11ರ ಬೆಳಗ್ಗೆ ಐಚ್ಚಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಜಿಯೋಲಾಜಿ,
ಸೆ.12ರ ಬೆಳಗ್ಗೆ ಅರ್ಥಶಾಸ್ತ್ರ, ಭೌತಶಾಸ್ತ್ರ,
ಸೆ.14ರ ಬೆಳಗ್ಗೆ ಲಾಜಿಕ್, ಬಿಸಿನೆಸ್ ಸ್ಟಡೀಸ್, ರಸಾಯನಶಾಸ್ತ್ರ, ಶಿಕ್ಷಣ,
ಸೆ.15ರ ಬೆಳಗ್ಗೆ ಕನ್ನಡ,
ಸೆ.16ರ ಬೆಳಗ್ಗೆ ರಾಜಕೀಯ ಶಾಸ್ತ್ರ, ಮೂಲ (ಬೇಸಿಕ್) ಗಣಿತ,
ಸೆ.18ರ ಬೆಳಗ್ಗೆ ಸಮಾಜಶಾಸ್ತ್ರ, ಅಕೌಂಟನ್ಸಿ, ಗಣಿತ ಹಾಗೂ
ಸೆ.19ರ ಬೆಳಗ್ಗೆ ಭೂಗೋಳಶಾಸ್ತ್ರ, ಮಧ್ಯಾಹ್ನ ಮನಃಶಾಸ್ತ್ರ (ಸೈಕಾಲಜಿ) ವಿಷಯಗಳ ಪರೀಕ್ಷೆಗಳು ಜರಗಲಿವೆ.