Recent Posts

Monday, January 20, 2025
ರಾಷ್ಟ್ರೀಯ

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್’ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಡಾ.ಎಸ್.ರಾಧಾಕೃಷ್ನ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಹಾಗೂ ದೇಶದ ಸರ್ವ ಶಿಕ್ಷಕರಿಗೂ ಹೃದಯಪೂರ್ವಕ ಶುಭಾಶಯಗಳನ್ನು ಹೇಳುತ್ತೇನೆಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮನಸ್ಸು ಮಾರ್ಪಡಿಸುವಲ್ಲಿ ಹಾಗೂ ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪರಿಶ್ರಮಕ್ಕೆ ನಾವು ಅತ್ಯಂತ ಕೃತಜ್ಞರಾಗಿರುತ್ತೇವೆ. ಶಿಕ್ಷಕರ ದಿನದಂದು, ಶಿಕ್ಷಕರ ಪರಿಶ್ರಮಕ್ಕೆ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮನದಿಂದು ಅವರಿಗೆ ನಾವು ಗೌರವ ಸಲ್ಲಿಸುತ್ತೇನೆ. #ನಮ್ಮಶಿಕ್ಷಕರುನಮ್ಮಹೀರೋಗಳು ಎಂದು ತಿಳಿಸಿದ್ದಾರೆ.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ 2ನೇ ರಾಷ್ಟ್ರಪತಿಯಾಗಿದ್ದರು. 1962ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಕೊಂಡ ರಾಧಾಕೃಷ್ಣನ್ ಅವರು, ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲಾ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. ರಾಧಾಕೃಷ್ಣನ್ ಅವರ ಅಪಾರ ಸೇವೆಯನ್ನು ಗುರ್ತಿಸಿ ಗೌರವಿಸಿದ್ದ ಭಾರತ ಸರ್ಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದ್ದಾಗಲೇ ಅವರಿಗೆ 1954ರಲ್ಲಿ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.