Saturday, November 23, 2024
ಸಂತಾಪಸುದ್ದಿ

ಎಡನೀರು ಮಠಾಧೀಶರು ಬಹುಮುಖ ಪ್ರತಿಭಾ ಸಂಪನ್ನರು: ಸಂತಾಪ ಸೂಚಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಧರ್ಮಸ್ಥಳ: ಪರಂಧಾಮ ಹೊಂದಿದ ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಉತ್ತಮ ವಾಗ್ಮಿ, ಭಾಷಾ ಪ್ರಭುತ್ವ ಹೊಂದಿದ ವಿದ್ವಾಂಸರಾಗಿದ್ದು, ಸಂಗೀತ, ಕಲೆ, ಶಿಕ್ಷಣ, ಸಾಹಿತ್ಯಕ್ಕೆ ವಿಶೇಷ ಪ್ರೋತ್ಸಾಹ, ಕೊಡುಗೆ ನೀಡಿದ್ದಾರೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಗೌರವ ನಮನ ಸಲ್ಲಿಸಿದ್ದಾರೆ.

ಯಕ್ಷಗಾನ ಕಲೆಯಲ್ಲಿ ಶ್ರೀ ಗಳು ವಿಶೇಷ ಅಸಕ್ತಿ, ಪರಿಣತಿ ಹೊಂದಿದ್ದು, ತಮ್ಮ ಸುಮಧುರ ಕಂಠಸಿರಿಯ ಭಾಗವತಿಕೆಯಿಂದ ಅಪಾರ ಅಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು‌.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲಭೂತ ಹಕ್ಕಿನ ವಿಚಾರವಾಗಿ ಖ್ಯಾತ ಸಂವಿಧಾನ ತಜ್ಞ, ವಕೀಲರಾದ ಶ್ರೀ ಪಾಲ್ಕಿವಾಲರ ಮೂಲಕ ಹೋರಾಟ ನಡೆಸಿದ್ದರು.
ಮಹಾಭಾರತ ಸಾಹಿತ್ಯದಲ್ಲಿ ನಡೆದ ಧರ್ಮದ ಹೋರಾಟದಿಂದ ಪ್ರೇರಣೆಯಾಗಿ ಸನ್ಯಾಸಿಯಾಗಿಯೂ ಹೋರಾಟ ನಡೆಸಿದವರು. ಅನೇಕ ಸಭೆ, ಸಮಾರಂಭಗಳಲ್ಲಿ ಅವರ ವಿದ್ವತ್ಪೂರ್ಣ ಪ್ರವಚನಗಳಿಂದ ಸಮಾಜಕ್ಕೆ ಉತ್ತಮ ಮೌಲಿಕ ಸಂದೇಶ ನೀಡಿದ್ದಾರೆ. ನಮ್ಮ ಕ್ಷೇತ್ರದ ಅನೇಕ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮನ್ನು ಪ್ರೋತ್ಸಾಹಿಸಿದ್ದಾರೆ ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಡಾ.ಹೆಗ್ಗಡೆಯವರು ನುಡಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು