ಮಂಗಳೂರು, ಸೆಪ್ಟೆಂಬರ್ 10: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 21 ಪಿಎಫ್ ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸದಸ್ಯರಿಗೆ ಬುಧವಾರ ಜಾಮೀನು ನೀಡಿದೆ.
2019ರ ಡಿ. 19ರಂದು ಸಿಎಎ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿ ಠಾಣೆಗೆ ಬೆಂಕಿ ಹಚ್ಚಿದ ಆರೋಪದಡಿ ಇವರನ್ನು ಬಂಧಿಸಿದ್ದು, ಇದೀಗ ಜಾಮೀನು ದೊರೆತಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು.
ಕುಮಾರಸ್ವಾಮಿ ಬಿಚ್ಚಿಟ್ಟ ಮಂಗಳೂರು ಗೋಲಿಬಾರ್ ನ ಇನ್ನೊಂದು ಮುಖ
ಇವರಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಈ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ಪ್ರತಿಭಟನಾಕಾರರಿಗೆ ನೀಡಿದ್ದ ಜಾಮೀನಿನ ಮೇಲೆ ಸುಪ್ರೀಂ ಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು.
ಮುಖ್ಯ ನ್ಯಾಯಾಧೀಶ ಬಾಬ್ಡೆ, ಎಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠವು ಇದೀಗ ಷರತ್ತುಬದ್ಧ ಜಾಮೀನು ನೀಡಿ ತಲಾ 25,000 ರೂ ಬಾಂಡ್ ಮತ್ತು ಪ್ರತಿ ಸೋಮವಾರ ಸಮೀಪದ ಪೊಲೀಸ್ ಠಾಣೆಯಲ್ಲಿ ವರದಿ ನೀಡಬೇಕು, ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿಕೊಳ್ಳಬಾರದು ಎಂಬ ಷರತ್ತು ವಿಧಿಸಿ ಜಾಮೀನು ನೀಡಿದೆ.