Friday, November 22, 2024
ಸುದ್ದಿ

ಭಾರತೀಯ ಭಾಷೆಗಳ ಅಭಿವೃದ್ಧಿಗೆ ಕೆಲಸ ; ಆರ್‌.ಎಸ್‌.ಎಸ್‌. ನಿರ್ಣಯ – ಕಹಳೆ ನ್ಯೂಸ್

RSS
RSS

ಬೆಂಗಳೂರು: ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಬೆಳವಣಿಗೆ ನಿಟ್ಟಿನಲ್ಲಿ ಕೆಲಸ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಅಖೀಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಆರ್‌ಎಸ್‌ಎಸ್‌ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಚಾಲಕ ವಿ. ನಾಗರಾಜ್‌ ಹೇಳಿದ್ದಾರೆ.

ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ  ಗುರುವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಭಾಷೆ ಎಂಬುದು ವ್ಯಕ್ತಿ, ಸಮಾಜ ಮತ್ತು ಸಂಸ್ಕೃತಿಯನ್ನು ಗುರುತಿಸುವ ಬಹುಮುಖ್ಯ ಅಂಶ ಎಂಬುದು ಆರ್‌ಎಸ್‌ಎಸ್‌ ನಿಲುವು. ಇತ್ತೀಚಿನ ದಿನಗಳಲ್ಲಿ ವಿದೇಶಿ ಭಾಷೆಗಳ ಬಳಕೆ ಹೆಚ್ಚಾಗುತ್ತಿರುವುದರಿಂದ ಭಾರತೀಯ ಭಾಷೆಗಳಿಗೆ ಅಪಾಯ ಹೆಚ್ಚಾಗುತ್ತಿದ್ದು, ಅದಕ್ಕಾಗಿ ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಬೆಳವಣಿಗೆಗೆ ಕೆಲಸ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
v nagaraj

ಭಾರತೀಯ ಭಾಷೆಗಳಲ್ಲಿ ಮೌಖೀಕವಾಗಿ ಹರಿದುಬಂದ ಜನಪದ ಸಾಹಿತ್ಯ, ಹಾಡು, ಗಾದೆಗಳ ಸಂಖ್ಯೆ ಬರಹದ ಮೂಲಕ ಹರಡಿರುವ ಸಾಹಿತ್ಯಕ್ಕಿಂತಲೂ ಹೆಚ್ಚು. ಈ ವಿಷಯದಲ್ಲಿ ಜಾಗರೂಕವಾಗಿರುವುದಲ್ಲದೆ, ಅವುಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್‌ಎಸ್‌ಎಸ್‌ ಸರಕಾರ್ಯವಾಹಕ ಸುರೇಶ್‌ ಭಯ್ನಾಜಿ ಜೋಶಿ ಅವರ ಕಾಲಾವಧಿಯಲ್ಲಿ ಆರ್‌ಎಸ್‌ಎಸ್‌ ಉತ್ತಮ ಸಾಧನೆ ಮಾಡಿದೆ. ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್‌ ಶಾಖೆಗಳ ಸಂಖ್ಯೆ ಹೆಚ್ಚಳವಾಗಿದ್ದು, ಪ್ರಸ್ತುತ 58967 ಶಾಖೆಗಳು ನಡೆಯುತ್ತಿವೆ. ಕರ್ನಾಟಕದಲ್ಲಿ 4547 ನಿತ್ಯಶಾಖೆಗಳು, 820 ಸಾಪ್ತಾಹಿಕ ಮಿಲನ್‌ಗಳು ಮತ್ತು 265 ಮಾಸಿಕ ಮಂಡಲಿಗಳು ನಡೆದಿವೆ ಎಂದು ವಿವರಿಸಿದರು.

ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆ ಇಲ್ಲವೇ ಭಾರತೀಯ ಭಾಷೆಗಳಲ್ಲಿ ನೀಡಬೇಕು. ತಾಂತ್ರಿಕ, ವೈದ್ಯಕೀಯ ಶಿಕ್ಷಣಕ್ಕೂ ಭಾರತೀಯ ಭಾಷೆಯ ಪುಸ್ತಕಗಳು ಬರಬೇಕು ಮತ್ತು ಪರೀಕ್ಷೆಗಳೂ ನಮ್ಮ ಭಾಷೆಯಲ್ಲೇ ಆಗಬೇಕು. ಸರಕಾರ ಮತ್ತು ನ್ಯಾಯಾಂಗದಲ್ಲಿ ಭಾರತೀಯ ಭಾಷೆಗಳಿಗೆ ಆದ್ಯತೆ ನೀಡಬೇಕು ಮತ್ತು ದೈನಂದಿನ ಭಾರತೀಯ ಭಾಷೆ ಬಳಕೆ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ವಿ. ನಾಗರಾಜ್‌ ತಿಳಿಸಿದರು.