Sunday, January 19, 2025
ಹೆಚ್ಚಿನ ಸುದ್ದಿ

BIG NEWS : ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆಗೆ ದಿನಾಂಕ ನಿಗದಿ! – ಕಹಳೆ ನ್ಯೂಸ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಮುಂದಿನ ವರ್ಷ ಜನವರಿ ಅಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನರಸಿಂಹ ಮೂರ್ತಿ ಎಂಬುವರು ಆರ್ ಟಿಐ ಕಾಯ್ದೆ ಅಡಿಯಲ್ಲಿ ಮಾಹಿತಿ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಜೈಲು ಅಧಿಕಾರಿಗಳು ಉತ್ತರ ನೀಡಿದ್ದು, ಶಶಿಕಲಾ ಅವರು ಜನವರಿ 27 ರ 2021 ರಂದು ಬಿಡುಗಡೆಯಾಗಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪಾವತಿಸಬೇಕಾದ ದಂಡ ಪಾವತಿಗೆ ವಿಳಂಬ ಮಾಡಿದರೆ ಅವರ ಬಿಡುಗಡೆ ಅವಧಿ ಮುಂದೂಡಲ್ಪಡುತ್ತದೆ ಎಂದು ತಿಳಿಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿಯಲ್ಲಿ ಶಶಿಕಲಾ ನಟರಾಜನ್ ಅವರು 2017 ರಲ್ಲಿ ಜೈಲು ಶಿಕ್ಷೆಗೆ ಒಳಗಾದ ಅವರ ಶಿಕ್ಷೆಯಯ ಅವಧಿ ಇನ್ನೂ ಮುಕ್ತಾಯಗೊಂಡಿಲ್ಲ. ಆದರೆ ಮುಂದಿನ ವರ್ಷ ಜನವರಿಗೆ ಮೂವರ ನಾಲ್ಕು ವರ್ಷಗಳ ಶಿಕ್ಷೆ ಪೂರ್ಣಗೊಳ್ಳಲಿದೆ. ಜೈಲಿನಲ್ಲಿದ್ದಾಗ ಶಶಿಕಲಾ ನಡತೆ, ಪೆರೋಲ್ ರಜೆ ಇವೆಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಿ, ಜನವರಿ ಅಂತ್ಯಕ್ಕೆ ಶಶಿಕಲಾ ಅಂಡ್ ಟೀಂ ಅನ್ನು ಬಿಡುಗಡೆ ಮಾಡಲು ಜೈಲಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು