Saturday, November 16, 2024
ಸುದ್ದಿ

ಅಭಿವೃದ್ಧಿ ಗೆ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಆದಿವಾಸಿ ಸಮಿತಿ ವತಿಯಿಂದ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು,ಸೆ.16(ಹಿ.ಸ): ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಅಭಿವೃದ್ಧಿ ನಡೆಸಲು ನಿರ್ಲಕ್ಷ್ಯ ವಹಿಸುತ್ತಿರುವ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪುತ್ತೂರು ಉಪ ವಿಭಾಗಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ಅರಣ್ಯ ಹಕ್ಕು ಕಾಯ್ದೆ 2006 ಜ್ಯಾರಿಯಾಗಿ 14 ವರ್ಷವಾದರೂ ದ.ಕ ಜಿಲ್ಲೆಯ ನಡ , ಸವಣಾಲು ಗ್ರಾಮದ ಕೇವಲ 9 ಮನೆಗಳಿಗೆ ವಿದ್ಯುತ್ ಸಂಪರ್ಕ ಹೊರತುಪಡಿಸಿ ಬೇರೆ ಯಾವುದೇ ಗ್ರಾಮದಲ್ಲೂ ರಸ್ತೆ , ವಿದ್ಯುತ್ ಸೇರಿದಂತೆ ಯಾವುದೇ ರೀತಿಯ ಅಭಿವೃದ್ಧಿಯಾಗಿರುವುದಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 74 ವರ್ಷ ಕಳೆದರೂ ಇಂದಿಗೂ ರಸ್ತೆ ಇಲ್ಲದೆ , ಕತ್ತಲೆಯಲ್ಲಿ ಜೀವಿಸಬೇಕಾದ ಪರಿಸ್ಥಿತಿ ಉದ್ಭವಿಸಿರುವುದು ವ್ಯವಸ್ಥೆಯ ಅಧಿಕಾರಿಗಳ ನಿರ್ಲಕ್ಷ್ಯ, ಬೇಜವ್ದಾರಿಯಾಗಿದೆ. ಇಂತಹ ಬೇಜವ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಅಭಿವೃದ್ಧಿ ಮಾಡಬೇಕು ಎಂದು ಪುತ್ತೂರು ಉಪ ವಿಭಾಗಧಿಕಾರಿ ಡಾ. ಯತೀಶ್ ಉಳ್ಳಾಲ್ ಅವರನ್ನು ಒತ್ತಾಯಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾವಂತ , ಬುದ್ದಿವಂತ ದ.ಕ ಜಿಲ್ಲೆಯ ಆದಿವಾಸಿ ಪ್ರದೇಶಗಳ ಪರಿಸ್ಥಿತಿ ಈ ರೀತಿಯಾದರೆ ಇನ್ನುಳಿದ ಆದಿವಾಸಿ ಪ್ರದೇಶದ ಪರಿಸ್ಥಿತಿ ಹೇಗಿರಬಹುದು ಎಂದು ಕ.ಆ.ಹ.ಸ.ಸಮಿತಿ ಪ್ರಶ್ನಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಯತೀಶ್ ಉಳ್ಳಾಲ್ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಅಕ್ಟೋಬರ್ 6 ರಂದು ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ನಡೆಸಿ , ಅದರ ನಿರ್ಣಯ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತಾಲೂಕು ಅಧ್ಯಕ್ಷ ವಸಂತ ನಡ , ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಸಂಚಾಲಕ ಶೇಖರ್ ಎಲ್ ಉಪಸ್ಥಿತರಿದ್ದರು.