ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ ಅಂತ್ಯ ಹಿನ್ನಲೆ : ಸೆ.30ರಂದು ಎಲ್.ಕೆ.ಅಡ್ವಾಣಿ, ಜೋಷಿ, ಉಮಾ ಭಾರತಿ ಸಹಿತ 32 ಮಂದಿಗೆ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ – ಕಹಳೆ ನ್ಯೂಸ್
ಹೊಸದಿಲ್ಲಿ: 1992ರಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ವಿಚಾರಣೆ ಸೆ.30ರಂದು ಅಂತ್ಯಗೊಳ್ಳಲಿದ್ದು, ಈ ವೇಳೆ ಎಲ್.ಕೆ.ಅಡ್ವಾಣಿ, ಉಮಾ ಭಾರತಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.
ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಮತ್ತು ಬಿಜೆಪಿ ನಾಯಕರು ಸೇರಿ 32 ಆರೋಪಿಗಳಲ್ಲಿ ಮುರ್ಲಿ ಮನೋಹರ್ ಜೋಶಿ, ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಸಾಕ್ಷಿ ಮಹಾರಾಜ್ ಕೂಡ ಹಾಜರಾಗಲಿದ್ದಾರೆ. ನ್ಯಾಯಾಧೀಶ ಎಸ್.ಕೆ. ಯಾದವ್ ಅವರ ತೀರ್ಪಿನ ಸಂದರ್ಭದಲ್ಲಿ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರಲಾಗಿದೆ.
ತೀರ್ಪು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೆ.30ರ ದಿನಾಂಕ ನಿಗದಿಪಡಿಸಿದೆ. ಸೆಪ್ಟೆಂಬರ್ 1 ರಂದು, ಸಿಆರ್ ಪಿಸಿಯ ಸೆಕ್ಷನ್ 313 ರ ಅಡಿಯಲ್ಲಿ ಎಲ್ಲಾ 32 ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿದೆ.
ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ಮಸೀದಿಯನ್ನು 1992 ರ ಡಿಸೆಂಬರ್ 6 ರಂದು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ಈ ಪ್ರಕರಣದಲ್ಲಿ ದಾಖಲಾದ ಒಟ್ಟು 49 ಆರೋಪಿಗಳಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ