Sunday, January 19, 2025
ಹೆಚ್ಚಿನ ಸುದ್ದಿ

ಪ್ರಧಾನಿ ಮೋದಿ ಹುಟ್ಟು ಹಬ್ಬಕ್ಕೆ ವಿಶ್ವದ ನಾನಾ ಕಡೆಯಿಂದ ಶುಭಾಶಯದ ಮಹಾಪೂರ – ಕಹಳೆ ನ್ಯೂಸ್

ನವದೆಹಲಿ: ಇಂದು ಪ್ರಧಾನಿ ಮೋದಿಯವರು ತಮ್ಮ 70ವರ್ಷದ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ದೇಶ-ವಿದೇಶಗಳಿಂದ ಜನಸಾಮಾನ್ಯರು ಹಾಗೂ ಗಣ್ಯರು ಶುಭಾಶಯಗಳನ್ನು ಕೋರುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್‌ ಮಾಡಿರುವ ರಾಹುಲ್‌ ಗಾಂಧಿ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು ಅಂತ ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಜನ್ಮದಿನವನ್ನು ಆಚರಿಸಲು ಬಿಜೆಪಿ ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ಸಂದರ್ಭವನ್ನು ಆಚರಿಸಲು 70 ಕೆಜಿ ಲಡ್ಡು ಸಹ ಸಿದ್ಧಪಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಡೋದರಾದಲ್ಲಿ, ಪ್ರಧಾನ್ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಅಡಿಯಲ್ಲಿ ಪಕ್ಷವು 20,000 ಕ್ಕೂ ಹೆಚ್ಚು ಜನರಿಗೆ ಜೀವ ವಿಮೆಯನ್ನು ನೀಡಿದೆ. ಪ್ರಧಾನಿ ಅವರ ಜನ್ಮದಿನದಂದು ಸೆಪ್ಟೆಂಬರ್ 14 ರಿಂದ 20 ರವರೆಗೆ ಬಿಜೆಪಿ ಸೇವಾ ಸಪ್ತ ಆಯೋಜಿಸಿದೆ.