Recent Posts

Sunday, January 19, 2025
ಸುದ್ದಿ

ಮೋದಿ ಹುಟ್ಟುಹಬ್ಬದ ಪ್ರಯುಕ್ತ ಪ್ಲಾಸ್ಮಾ ದಾನ ಮಾಡಿದ ಮಂಗಳೂರು ಶಾಸಕ – ಕಹಳೆ ನ್ಯೂಸ್

ಮಂಗಳೂರು, ಸೆ 17: ಪ್ರಧಾನಿ ನರೇಂದ್ರ ಮೋದಿಯವರ ಎಪ್ಪತ್ತನೇ ಜನ್ಮದಿನದ ಪ್ರಯುಕ್ತ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿ ಮಾದರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಭರತ್ ಶೆಟ್ಟಿ, ಎಲ್ಲರೂ ಪ್ಲಾಸ್ಮಾ ದಾನ ಮಾಡಲು ಮುಂದೆ ಬರಬೇಕು ಎಂದು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದಲ್ಲಿ 9366 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಈ ಬಗ್ಗೆ ಟ್ವೀಟ್ ಮಾಡಿರುವ ಭರತ್ ಶೆಟ್ಟಿ, “ಪ್ರಧಾನಿ ಮೋದಿಯವರ ಎಪ್ಪತ್ತನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಶಪಥ ಅಭಿಯಾನದಡಿ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದ್ದೇನೆ. ಸೋಂಕಿತರಿಗಾಗಿ, ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಿ” ಎಂದು ಭರತ್ ಶೆಟ್ಟಿ ಮನವಿ ಮಾಡಿದ್ದಾರೆ.

ಬಿಜೆಪಿಯ ದಕ್ಷಿಣಕನ್ನಡ ಘಟಕ ಆಯೋಜಿಸಿದ್ದ ವಿವಿಧ ರಕ್ತದಾನ ಶಿಬಿರಕ್ಕೂ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ, ಭರತ್ ಶೆಟ್ಟಿ ಭೇಟಿ ನೀಡಿದ್ದಾರೆ.

ಕಳೆದ ಜುಲೈ ತಿಂಗಳ ಆರಂಭದಲ್ಲಿ ಡಾ.ಭರತ್ ಶೆಟ್ಟಿಯವರಿಗೆ ಕೊರೊನಾ ಸೋಂಕು ಕಾಣಿಸಿತ್ತು. “ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮ ಆಶೀರ್ವಾದದೊಂದಿಗೆ ಗುಣಮುಖನಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ” ಎಂದು ಅವರು ಹೇಳಿದ್ದರು.

ಈ ಹಿಂದೆ ಕುಣಿಗಲ್ ಶಾಸಕರಾಗಿರುವ ಡಾ.ರಂಗನಾಥ್ ಕೂಡಾ ಪ್ಲಾಸ್ಮಾ ದಾನ ಮಾಡಿದ್ದರು. ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಮಹತ್ವದ ಪಾತ್ರವನ್ನು ವಹಿಸುತ್ತಿದ್ದು ಈ ನಿಟ್ಟಿನಲ್ಲಿ ಜನರಲ್ಲಿ ಪ್ಲಾಸ್ಮಾ ದಾನದ ಅರಿವು ಮೂಡಿಸಲು ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯಿಂದ ಸೈಕಲ್ ಜಾಥಾ ನಡೆಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.