ಕೊಲ್ಲಮೊಗರು: ಹರಿಹರ, ಕೊಲ್ಲಮೊಗರು, ಭಾಗದಲ್ಲಿ ಸುಮಾರು ನಾಲ್ಕು ದಿನಗಳಿಂದ ಬಿ.ಎಸ್.ಎನ್.ಎಲ್. ನೆಟ್ವರ್ಕ್ ಸಿಗದೇ ಈ ಭಾಗದ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಬಗ್ಗೆ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರು ಯಾರು ಸ್ಪಂದಿಸುತ್ತಿಲ್ಲ ಎಂದು ಮಾಧ್ಯಮಕ್ಕೆ ಸ್ಥಳೀಯರು ದೂರು ನೀಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಈ ಭಾಗದಲ್ಲಿ ಭೂ ಕುಸಿತ ಅಥವಾ ಇನ್ಯಾವುದೇ ದುರ್ಘಟನೆ ನಡೆದರೆ ತಕ್ಷಣಕ್ಕೆ ಯಾವುದೇ ವ್ಯವಸ್ಥೆ ಇಲ್ಲ. ಹೀಗಾಗಿ ಅಧಿಕಾರಿಗಳು ಇಲ್ಲಿಯಾ ಸಮಸ್ಯೆಗೆ ತಕ್ಷಣ ಪರಿಹಾರ ಮಾಡಿಕೊಡಬೇಕಾಗಿದೆ.