ಬೆಂಗಳೂರು, ಸೆ.24 (ಹಿ.ಸ) : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯನಟ ರಾಕ್ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣದ ವೇಳೆ ಸೆಟ್ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೆ ನಟ ರಾಕ್ಲೈನ್ ಸುಧಾಕರ್ ಕೊರೊನಾ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು.
ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ, ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ ಸುಧಾರಕ್ ವಿಧಿವಶರಾಗಿದ್ದಾರೆ. ಈ ಬಗ್ಗೆ ಖುದ್ದು ಟ್ವೀಟ್ ಮಾಡುವ ಮೂಲಕ ನಿರ್ದೇಶಕ ಸುನಿ ಮಾಹಿತಿ ನೀಡಿದ್ದಾರೆ.