Wednesday, January 22, 2025
ರಾಷ್ಟ್ರೀಯಸಿನಿಮಾಸುದ್ದಿ

Breaking News : ಜನಪ್ರಿಯ ಗಾಯಕ ಎಸ್​​ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಅತ್ಯಂತ ಗಂಭೀರ – ಕಹಳೆ ನ್ಯೂಸ್

ಚೆನ್ನೈ, ಸುದ್ದಿಒನ್, (ಸೆ.24): ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಮಣಿಯನ್ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕರೋನಾದಿಂದ ಚೇತರಿಸಿಕೊಂಡ ನಂತರ ಅವರು ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

40 ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ಸಹಾ ಇನ್ನೂ ಅವರು ವೈದ್ಯಕೀಯ ತಪಾಸಣೆಯಲ್ಲಿದ್ದಾರೆ UNDER MEDICAL OBSERVATION). ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಮತ್ತೆ ಅನಾರೋಗ್ಯದ ಉಂಟಾದ ಕಾರಣದಿಂದ ಅಭಿಮಾನಿಗಳ ಎದೆಬಡಿತವನ್ನು ಮತ್ತಷ್ಟು ಹೆಚ್ಚಾದಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರೋನಾ ಪಾಸಿಟಿವ್ ಧೃಢವಾದ ಕಾರಣ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ನೆಚ್ಚಿನ ಗಾಯಕ ಸಂಪೂರ್ಣವಾಗಿ ಚೇತರಿಸಿಕೊಂಡು ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗುತ್ತಾರೆಂದು ಕಾಯುತ್ತಿರುವ ಅಭಿಮಾನಿಗಳಿಗೆ ಈ ಸುದ್ದಿಯಿಂದ ಆಘಾತವಾಗಿದೆ.

ಬಾಲಸುಬ್ರಮಣ್ಯಂ ಅವರ ಪುತ್ರ ಎಸ್‌ಪಿ ಚರಣ್ ನಾಲ್ಕು ದಿನಗಳ ಹಿಂದೆ ತಮ್ಮ ತಂದೆ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದರು.

ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ಭೌತಚಿಕಿತ್ಸೆಯನ್ನು (PHYSIOTHERAPY) ಮಾಡುತ್ತಿದ್ದಾರೆ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಸಹಾಯದಿಂದ ಎದ್ದು ಕುಳಿತುಕೊಳ್ಳುತ್ತಾರೆ ಎಂದು ಚರಣ್ ಹೇಳಿದ್ದರು. ಆದರೆ ಇದೀಗ ಬಾಲಸುಬ್ರಮಣ್ಯಂ ಅವರ ಕುಟುಂಬ ಸದಸ್ಯರು ಮತ್ತು ಚಿತ್ರರಂಗದ ಸದಸ್ಯರು ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆತಂಕದಲ್ಲಿದ್ದಾರೆ.