Sunday, November 17, 2024
ಹೆಚ್ಚಿನ ಸುದ್ದಿ

ಗ್ರಾ.ಪಂ ಚುನಾವಣೆ : ಸೂಕ್ತ ಬಂದೋಬಸ್ತ್‌ಗೆ ಪೊಲೀಸರಿಗೆ ಆಯೋಗ ಪತ್ರ-ಕಹಳೆ ನ್ಯೂಸ್

ಬೆಂಗಳೂರು, ಸೆ.25- ಅಕ್ಟೋಬರ್- ನವೆಂಬರ್‍ನಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಗೆ ಸೂಕ್ತ ಬಂದೋಬಸ್ತ್ ಏರ್ಪಡಿಸುವಂತೆ ರಾಜ್ಯ ಚುನವಣಾ ಆಯೋಗ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ವೈರಾಣು ಸಂಕಷ್ಟದ ಕಾಲದಲ್ಲಿ ಪಂಚಾಯತ್ ಚುನಾವಣೆಯನ್ನು ಮುಂದೂಡಲು ರಾಜ್ಯ ಬಿಜೆಪಿ ಸರ್ಕಾರ ಕೋರಿರುವ ಮಧ್ಯೆಯೇ ಚುನಾವಣೆ ನಡೆಸಲು ಆಯೋಗ ಕಾರ್ಯೋನ್ಮುಖವಾಗಿರುವುದು ಮಹತ್ವ ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಾದ್ಯಂತ 5800 ಗ್ರಾಮ ಪಂಚಾಯತಿಗಳಿಗೆ 2020ರ ಅಕ್ಟೋಬರ್ – ನವೆಂಬರ್‍ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಚುನಾವಣೆಗೆ ತಮ್ಮ ಇಲಾಖೆ ಸಹಕಾರ ಅಗತ್ಯವಾಗಿರುತ್ತದೆ. ರಾಜ್ಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥಿತವಾಗಿ ಚುನಾವಣೆಗಳನ್ನು ನಡೆಸುವ ಉದ್ದೇಶದಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಬೇಕು. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಪೊಲೀಸ್ ಸಿಬ್ಬಂದಿ ನಿರ್ವಹಣೆ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪತ್ರದಲ್ಲಿ ತಿಳಿಸಲಾಗಿದೆ.

ಪೊಲೀಸ್ ಇಲಾಖೆಯ ವಾಹನ, ಸಿಬ್ಬಂದಿಗೆ ದಿನ ಭತ್ಯೆ ಮತ್ತು ಪ್ರಯಾಣ ಭತ್ಯೆ ಇತ್ಯಾದಿಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಕುರಿತು ಪ್ರಸ್ತಾವನೆಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಚುನಾವಣಾ ಆಯೋಗ ರಾಜ್ಯ ಪೊಲೀಸ್ ಮಾಹಾನಿರ್ದೇಶಕರಿಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ 5800 ಗ್ರಾಮ ಪಂಚಾಯಿತಿಗಳಿಗೆ 2020ರ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಉದ್ದೇಶಿಸಿದೆ. ಈ ಚುನಾವಣೆಗೆ ಪೊಲೀಸ್ ಇಲಾಖೆಯ ಸಹಕಾರ ಅಗತ್ಯವಾಗಿದೆ. ರಾಜ್ಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥಿತವಾಗಿ ಚುನಾವಣೆಗಳನ್ನು ನಡೆಸುವ ಉದ್ದೇಶದಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳುವುದು ಮತ್ತು ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಪೊಲೀಸ್ ಸಿಬ್ಬಂದಿಗಳ ನಿರ್ವಹಣೆ ಸೇರಿದಂತೆ ಇನ್ನಿತರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ ಎಂದು ಆಯೋಗದ ಅೀನ ಕಾರ್ಯದರ್ಶಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ಪರಿಸ್ಥಿತಿ ವಿಷಮಿಸುತ್ತಿರುವುದನ್ನು ಮುಂದಿರಿಸಿ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾರರ ಪಟ್ಟಿಗೆ ಕಾರ್ಯಕ್ರಮ ಸಿದ್ಧಪಡಿಸಿಕೊಳ್ಳುವಂತೆ ಎಲ್ಲಾ ಜಿಲ್ಲಾಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿತ್ತು.

‘ಅಲ್ಲದೆ, ಜಿಲ್ಲಾಕಾರಿಗಳ ಅಭಿಪ್ರಾಯದಂತೆ ಅಕ್ಟೋಬರ್ ತಿಂಗಳಿನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್ ಗಮನಕ್ಕೆ ಆಯೋಗ ತಂದಿತ್ತು.

ಸಂವಿಧಾನದ ಅನುಚ್ಛೇದ 243ಇ (3)ರ ಅನ್ವಯ ಮತ್ತು ರಾಜ್ಯ ಕಾಯ್ದೆಯ 308 (ಎಎ) ಸ್ಪಷ್ಟವಾಗಿ ನಿರ್ದೇಶಿಸಿರುವಂತೆ ಗ್ರಾಮ ಪಂಚಾಯಿತಿಯ ಅವ ಪೂರ್ಣಗೊಳ್ಳುವ ಮೊದಲು ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ. ಚುನಾವಣಾ ಆಯೋಗ ಸಂವಿಧಾನ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ-1993ನ್ನು ಕ್ಕರಿಸಿ ಕೆಲಸ ಮಾಡಬಾರದು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಯೋಗಕ್ಕೆ ಮನವರಿಕೆ ಮಾಡಿಕೊಟ್ಟಿತ್ತು.

ಯಾವುದೇ ಪಂಚಾಯಿತಿ ಪ್ರದೇಶದಲ್ಲಿ ಸದ್ಯ ಕಂಟೈನ್ಮೆಂಟ್ ಪ್ರದೇಶ ಇಲ್ಲ. ಈ ಪ್ರದೇಶ ಇಲ್ಲದ ಪ್ರದೇಶಗಳಲ್ಲಿ ಚುನಾವಣೆ ನಡೆಸಲು ಯಾವುದೇ ತೊಂದರೆ ಇಲ್ಲ. ಸಂವಿಧಾನ ಮತ್ತು ಕಾಯ್ದೆಯನ್ನು ಪಾಲಿಸಲೇಬೇಕಾದ ಉತ್ತರದಾಯಿತ್ವ ಚುನಾವಣಾ ಆಯೋಗದ್ದು ಎಂದು ಕಾಂಗ್ರೆಸ್ ಪ್ರತಿಪಾದಿಸಿತ್ತು.