ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯದಲ್ಲಿ ಶೇ. 40 ರಷ್ಟು ಕಡಿತ ಮಾಡಲಾಗುತ್ತದೆ ಎಂಬ ಸುದ್ದಿಗಳು ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ದ್ವಿತೀಯ ಪಿಯುಸಿ ಪಠ್ಯದಲ್ಲಿ ಶೇ. 40 ರಷ್ಟು ಕಡಿತ ಮಾಡಲಾಗುತ್ತದೆ ಎಂಬ ವಿಚಾರ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಈ ವಿಚಾರ ನನ್ನ ಬಳಿ ಚರ್ಚೆಗೆ ಬಂದಿಲ್ಲ. ಈ ಬಗ್ಗೆ ನಾನು ಇಂದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ಮಾಡುತ್ತೇನೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಶೇ. 30 ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿತ್ತು. ಕೇಂದ್ರ ಶಿಕ್ಷಣ ಸಚಿವಾಲಯದ ಸೂಚನೆಯನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಮತ್ತೆ ಶೇ. 10 ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಲು ಇಲಾಖೆ ಚರ್ಚೆ ನಡೆಸಿದೆ. ಅಗತ್ಯ ಪಠ್ಯವನ್ನು ಉಳಿಸಿಕೊಳ್ಳಲು ತಜ್ಞರ ಸಲಹೆ ಪಡೆದುಕೊಂಡು ತಜ್ಞರ ಸಲಹೆ ಮೇರೆಗೆ ದ್ವಿತೀಯ ಪಿಯುಸಿ ಪಠ್ಯದಲ್ಲಿ ಶೇ. 40 ರಷ್ಟು ಕಡಿತ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.