Monday, November 18, 2024
ಪುತ್ತೂರು

ಆನ್ ಲೈನ್‍ನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಾಗಾರ ನಡೆಸಿದ ಸಂತ ಫಿಲೋಮಿನಾ ಕಾಲೇಜ್-ಕಹಳೆ ನ್ಯೂಸ್

ಪುತ್ತೂರು: ಯುವ ಜನತೆಯು ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಕಾರಗೊಳಿಸುವ ಮೂಲಕ ದೇಶ ಕಟ್ಟುವ ಕೈಂಕರ್ಯದಲ್ಲಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್‍ರೈ ಹೇಳಿದ್ದಾರೆ.


ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಿನ್ನೆ ಆಯೋಜಿಸಿದ 51ನೇ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಆನ್ ಲೈನ್ ವೇದಿಕೆಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಎನ್.ಎಸ್.ಎಸ್ ಸ್ವಯಂ ಸೇವಕರು ನಿಸ್ವಾರ್ಥತೆ, ರಾಷ್ಟ್ರೀಯತೆ, ಪರೋಪಕಾರ, ಸಹಿಷ್ಣುತೆ ಮೊದಲಾದ ಗುಣಾತ್ಮಕ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು. ಯುವ ಜನಾಂಗವು ತನ್ನಲ್ಲಿರುವ ಎಲ್ಲಾ ರೀತಿಯ ಶಕ್ತಿ ಸಾಮಥ್ರ್ಯವವನ್ನು ಧನಾತ್ಮಕವಾಗಿ ಬಳಸಿಕೊಳ್ಳುವಲ್ಲಿ ಸತತ ಪ್ರಯತ್ನಿಸಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಲ್ಲಿ ಅಡಗಿರುವ ಕಾರ್ಯನಿಷ್ಠೆ ಮತ್ತು ಬದ್ಧತೆ ನಿಜಕ್ಕೂ ಶ್ಲಾಘನೀಯ. ಇವರು ಯುವ ಸಮುದಾಯಕ್ಕೆ ಮಾದರಿ ಎಂದರು.
ಆನ್ ಲೈನ್‍ನಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕದ ಎಲ್ಲಾ ಸ್ವಯಂ ಸೇವಕರು ಭಾಗವಹಿಸಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ದಿನಕರ್‍ಅಂಚನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಾಧಿಕಾರಿ ಶಶಿಪ್ರಭಾ ಬಿ ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು