Recent Posts

Tuesday, November 19, 2024
ಸುದ್ದಿ

ಉದಯೋನ್ಮುಖ ಕಬ್ಬಡಿ ಆಟಗಾರ ಕನಸಿಗೆ ಆರ್ ಎಎ ತಣ್ಣೀರು-ಕಹಳೆ ನ್ಯೂಸ್

ಮಂಗಳೂರು, ಸೆ.27 (ಹಿ.ಸ) : ಈ ಬಾರಿಯ ರಾಷ್ಟ್ರೀಯ ಕಬಡ್ಡಿ ತಂಡ ಸೀನಿಯರ್ ವಿಭಾಗದ ಸಂಭಾವ್ಯ ಆಟಗಾರರಲ್ಲಿ ಸ್ಥಾನ ಪಡೆದುಕೊಂಡಿದ್ದ ರಾಜ್ಯದ ಏಕೈಕ ಕಬಡ್ಡಿ ಪಟುವಿಗೆ ತರಬೇತಿ ಶಿಬಿರಕ್ಕೆ ಪಾಲ್ಗೊಳ್ಳಲು ಆಹ್ವಾನ ನೀಡದೆ ತಡೆಯೊಡ್ಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿಯಾಗಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಚಿನ್‌ ಪ್ರತಾಪ್‌ ಮೊದಲ ಹಂತದ ಆನ್‌ಲೈನ್‌ ತರಬೇತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗದಿರುವ ಕ್ರೀಡಾಪಟು ಆಗಿದ್ದಾರೆ. ನಿಮ್ಮ ಆಯ್ಕೆ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎಂದು ಉತ್ತರ ದೆಹಲಿಯ ರಾಷ್ಟ್ರೀಯ ಅಮೆಚೂರ್ ಅಸೋಸಿಯೇಶನ್ ಉತ್ತರ ನೀಡಿದ್ದು, ಇದರಿಂದಾಗಿ ಹಳ್ಳಿಗಾಡಿನ ಪ್ರತಿಭೆಗೆ ಅವಕಾಶ ಕೈತಪ್ಪುವ ಆತಂಕವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋವಿಡ್ ನಿಂದಾಗಿ ಮುಂದೂಡಿದ್ದ ತರಬೇತಿ ಶಿಬಿರದ ಪ್ರಥಮ ಅವಧಿ ಆನ್‌ಲೈನ್‌ ಕ್ಲಾಸ್‌ ತರಗತಿಗಳು ಕೆಲ ದಿನಗಳ ಹಿಂದೆ ಮುಗಿದಿದ್ದು, ತರಬೇತಿಗೆ ಪಾಲ್ಗೊಳ್ಳಲು ದೆಹಲಿಯಲ್ಲಿರುವ ರಾಷ್ಟ್ರೀಯ ಕಬಡ್ಡಿ ಅಸೋಸಿಯೇಶನ್‌ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಪ್ರತಾಪ್‌ ಅವರ ಹೆಸರನ್ನು ಕೈ ಬಿಡಲಾಗಿದೆ ಎಂದು ತಿಳಿದುಬಂದಿದೆ.

ಅವಕಾಶ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬೆಳ್ತಂಗಡಿ ಶಾಸಕರ ಹರೀಶ್ ಪೂಂಜಾ ಅವರನ್ನು ಸಚಿನ್ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಪ್ರತಿಕ್ರಿಯೆ ನೀಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸಿ ಟಿ ರವಿ ಅವರು, ರಾಷ್ಟ್ರೀಯ ಕಬಡ್ಡಿ ಅಸೋಸಿಯೇಷನ್ ಜೊತೆಗೆ ಮಾತುಕತೆ ನಡೆಸಿ ಶೀಘ್ರದಲ್ಲಿಯೇ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಹೇಳಿದ್ದಾರೆ.