ಮಂಗಳೂರು: ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆ ಎಸ್ ಆರ್ ಟಿ ಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿದ್ದು, ಬಂದರು ಪ್ರದೇಶದಲ್ಲಿ ವ್ಯಾಪಾರ ವಹಿವಾಟುಗಳು ಆರಂಭವಾಗಿದೆ.
ಇನ್ನು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
6 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿಗಳು ಮತ್ತು 50 ಹೋಂ ಗಾರ್ಡ್ ಗಳನ್ನು ನಿಯೋಜನೆ ಮಾಡಿದ್ದು, ಇಂದು ಬೆಳಗ್ಗಿನಿಂದಲೇ ಪೊಲೀಸ್ ಅಧಿಕಾರಿಗಳು ರೌಂಡ್ಸ್ ನಲ್ಲಿದ್ದಾರೆ.
ಇನ್ನು ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮದ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಗಿರುವ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ನಗರದ ಮಿನಿ ವಿಧಾನಸೌಧದ ಎದುರು ರೈತಪರ ಸಂಘಟನೆಗಳು, ಡಿವೈಎಫ್ ಐ ,ಸಿಪಿಐ, ಸಿಪಿಐಎಂ, ಕಾಂಗ್ರೆಸ್ ,ಜೆಡಿಎಸ್ , ಸಿಐಟಿಯು,ಎಐಟಿಯುಸಿ, ಡಿ ಎಸ್ ಎಸ್ ಸಂಘಟನೆಯಿಂದ ಪ್ರತಿಭಟನೆ ನಡೆಯಲಿದೆ.