Tuesday, November 19, 2024
ಹೆಚ್ಚಿನ ಸುದ್ದಿ

ಕೊರೋನಾ ಆತಂಕದ ನಡುವೆ ನವೆಂಬರ್ 1 ರಿಂದ ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ತರಗತಿಗಳ ಪ್ರಾರಂಭ….?-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿವಿ ಪದವಿ ಹಾಗೂ ಸ್ನಾತಕೋತ್ತರ ತರಗತಿಗಳು ನವೆಂಬರ್ ಮೊದಲ ವಾರದಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್‌. ಯಡಪಡಿತ್ತಾಯ ಅವರು, ಯುಜಿಸಿ ನಿರ್ದೇಶನದ ಪ್ರಕಾರ, ನವೆಂಬರ್ 1 ರಿಂದ ತರಗತಿಗಳನ್ನು ಪ್ರಾರಂಭಿಸಲು ನಾವು ಸಿದ್ಧತೆ ನಡೆಸಿಕೊಳ್ಳುತ್ತಿದ್ದೇವೆ ಅಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯುತ್ತಿದ್ದು ಸೆಪ್ಟೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುತ್ತವೆ. ಅಕ್ಟೋಬರ್ 20 ರ ಮೊದಲು ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ನವೆಂಬರ್ 1 ರಿಂದಲೇ ಸ್ನಾತಕೋತ್ತರ ಕೋರ್ಸ್‌ಗಳ ತರಗತಿಗಳನ್ನು ಪ್ರಾರಂಭಿಸಲು ಸಿದ್ದತೆ ನಡೆಸಲಾಗಿದೆ.

ಹಾಗಂತ ಈ ನಿರ್ಧಾರ ಅಂತಿಮವಲ್ಲ, ಈ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆಯನ್ನು ಆನ್‌ಲೈನ್ ಮತ್ತು ಆಫ್‌ಲೈನ್‌ ಮೂಲಕ ವಿವಿ ನಡೆಯಲಿದ್ದು, ಮಂಗಳೂರು ವಿವಿ ವ್ಯಾಪ್ತಿಗೆ ಬರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಕೊರೋನಾ ಪರಿಸ್ಥಿತಿಯನ್ನು ಗಮನಿಸಿಕೊಂಡು ಆಯಾ ಜಿಲ್ಲಾಡಳಿತಗಳು ಅನುಮತಿ ಕೊಟ್ಟ ಬಳಿಕವೇ ತರಗತಿಗಳು ಪ್ರಾರಂಭವಾಗಲಿದೆ.
ಈಗಾಗಲೇ ಮಂಗಳೂರಿನಲ್ಲಿ ಸಾಮಾಜಿಕ ಅಂತರ ಅನ್ನುವುದನ್ನು ಜನ ಮರೆತು ಬಿಟ್ಟಿದ್ದಾರೆ. ಖಾಸಗಿ ಬಸ್ ಗಳಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ನವೆಂಬರ್ ಹೊತ್ತಿಗೆ ಜಿಲ್ಲೆಯಲ್ಲಿ ಕೊರೋನಾ ಪರಿಸ್ಥಿತಿ ಏನಾಗಿರುತ್ತದೋ ಗೊತ್ತಿಲ್ಲ.