ಬೆಂಗಳೂರು : ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಇಂದು ನಡೆಯುತ್ತಿರು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.
ಕರ್ನಾಟಕ ಬಂದ್ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಗುಪ್ತಚರ ಇಲಾಖೆ ಮುಖ್ಯಸ್ಥ ದಯಾನಂದ್ ರಿಂದ ಮಾಹಿತಿ ಪಡೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ಜೋರಾಗುತ್ತಿದ್ದು, ರೈತರಿಗೆ ಸಂದೇಶ ಕೊಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನಲಾಗಿದೆ.
ಮಾಧ್ಯಮಗಳ ಮೂಲಕ ಅಥವಾ ಫೇಸ್ಬುಕ್ ಮೂಲಕ ಕೃಷಿ ಕಾಯ್ದೆಗಳ ಗೊಂದಲದ ಬಗ್ಗೆ ಮನವರಿಕೆ ಮಾಡಿ ರೈತರ ಸಮಾಧಾನ ಪಡಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಇನ್ನು ಸ್ವಲ್ಪ ಹೊತ್ತಲ್ಲೇ ಸಿಎಂರಿಂದ ಸುದ್ದಿಗೋಷ್ಠಿ ಅಥವಾ ಫೇಸ್ ಬುಕ್ ಲೈವ್ ಬರುವ ಸಾಧ್ಯತೆ ಇದೆ.