Recent Posts

Sunday, January 19, 2025
ಸುದ್ದಿ

ನಾಳೆ ಬಾಬ್ರಿ ಮಸೀದಿ ಅಂತಿಮ ತೀರ್ಪು : ಬಿಜೆಪಿಯ ಘಟಾನುಘಟಿ ನಾಯಕರ ಭವಿಷ್ಯ ನಿರ್ಧಾರ-ಕಹಳೆ ನ್ಯೂಸ್

ನವದೆಹಲಿ : ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ವಿವಾದಿತ ಇಪ್ಪತ್ತೇಳು ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ನಾಳೆ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದ್ದು, ಬಿಜೆಪಿಯ ಘಟಾನುಘಟಿ ನಾಯಕರ ಭವಿಷ್ಯ ತೀರ್ಮಾನವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತೀರ್ಪು ಪ್ರಕಟವಾಗುವ ಸಂದರ್ಭದಲ್ಲಿ ಪ್ರಕರಣದ ಎಲ್ಲಾ 32 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಬಿಐ ವಿಶೇಷ ನ್ಯಾಯಮೂರ್ತಿ ಎಸ್.ಕೆ. ಯಾದವ್ ಅವರು ಈಗಾಗಲೇ ನಿರ್ದೇಶನ ನೀಡಿದ್ದಾರೆ. ಮುನ್ನಚ್ಚರಿಕ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ದೇಶದ್ಯಾಂತ ಸೂಕ್ಮ ಹಾಗೂ ಅತೀ ಸೂಕ್ಮ ಪ್ರದೇಶ ಸೇರಿದಂತೆ ಎಲ್ಲೆಡೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ ಕುರಿತಂತೆ ಸಿಬಿಐ ಈವರೆಗೆ ಸುಮಾರು 351 ಸಾಕ್ಷಿಗಳು ಮತ್ತು 600 ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಒಟ್ಟು 49 ಜನರು ಆರೋಪಿಗಳಿದ್ದರು. ಆದರೆ ಅದರಲ್ಲಿ 17 ಜನ ಈಗಾಗಲೇ ಮೃತಪಟ್ಟಿದ್ದಾರೆ.

ಈ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾಭಾರತಿ,್ತ ಕಲ್ಯಾಣ್ ಸಿಂಗ್,ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಸಾಕ್ಷಿ ಮಹಾರಾಜ್ ಸೇರಿದಂತೆ 32 ಜನ ಆರೋಪಿಗಳಾಗಿದ್ದಾರೆ.

ಸೆ.01ರಂದೇ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಹೀಗಾಗಿ ವಿಶೇಷ ನ್ಯಾಯಾಧೀಶರು ಇದರ ತೀರ್ಪು ಬರೆಯಲು ಪ್ರಾರಂಭಿಸಿದ್ದಾರೆನ್ನಲಾಗಿದೆ. ಸಿಬಿಐ ಒಟ್ಟು 351 ಸಾಕ್ಷಿಗಳು ಮತ್ತು ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಕರ ಸೇವಕರು 1992 ರ ಡಿಸೆಂಬರ್ 6 ರಂದು ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು ಎಂಬ ಬಗೆಗಿನ ಸಾಕ್ಷ್ಯಾಧಾರಗಳು ಇವಾಗಿವೆ.

1992 ರಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ವಿಚಾರಣೆಯಲ್ಲಿದ್ದಾರೆ. ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (ಸೆಕ್ಷನ್ 153 ಎ), ರಾಷ್ಟ್ರೀಯ ಏಕೀಕರಣದ ಮೇಲೆ ಪರಿಣಾಮ ಬೀರುವ ಹೇಳಿಕೆಗಳನ್ನು ನೀಡುವುದು (ಸೆಕ್ಷನ್ 153 ಬಿ) ಅಥವಾ ಸಾರ್ವಜನಿಕ ಕಿಡಿಗೇಡಿತನಕ್ಕೆ (ಸೆಕ್ಷನ್ 505) ಸೇರಿದಂತೆ ಭಾರತೀಯ ಅಪರಾಧ ಸಂಹಿತೆ (ಐಪಿಸಿ) ಅಡಿಯಲ್ಲಿ ವಿವಿಧ ಅಪರಾಧಗಳಿಗೆ ಅವರ ಮೇಲೆ ಆರೋಪ ಹೊರಿಸಲಾಗಿದೆ.

ಅಯೋಧ್ಯೆಯಲ್ಲಿನ ಮಸೀದಿಯನ್ನು ಪುರಾತನ ರಾಮ್ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿಕೊಂಡ ಬಾಬರಿ ಮಸೀದಿಯನ್ನು 1992 ರ ಡಿಸೆಂಬರ್‍ನಲ್ಲಿ ಕರ್ ಸೇವಕರು ಧ್ವಂಸ ಮಾಡಿದ್ದರು. ಈ ಸ್ಥಳದ ಕುರಿತಾದ ಭೂ ವಿವಾದವನ್ನು ಕಳೆದ ವರ್ಷ ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿತು, ಇದು ರಾಮ್ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿತು. ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಪರ್ಯಾಯ ಸ್ಥಳವನ್ನು ಮಂಜೂರು ಮಾಡಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ಏನಿದು ಪ್ರಕರಣ?: ಮೊಘಲರ ಕಾಲದಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕಟ್ಟಲಾಗಿತ್ತು. ರಾಮ ಮಂದಿರ ಕೆಡವಿ ಬಾಬ್ರಿ ಮಸೀದಿ ಕಟ್ಟಲಾಗಿದೆ ಎಂದು ಹಿಂದುಗಳು ಆರೋಪಿಸಿದ್ದರು. 1984ರಲ್ಲಿ ವಿಶ್ವ ಹಿಂದು ಪರಿಷತ್ ಈ ವಿಚಾರದಲ್ಲಿ ಸಾರ್ವಜನಿಕರ ಬೆಂಬಲ ತೆಗೆದುಕೊಳ್ಳಲು ಆಂದೋಲನ ಆರಂಭಿಸಿತ್ತು.

ನಂತರ ಈ ವಿಚಾರ ಕೋರ್ಟ್ ಮೆಟ್ಟಿಲೇರಿತು. 1992ರಲ್ಲಿ ಅನೇಕ ಹಿಂದು ಕಾರ್ಯಕರ್ತರು ಬಾಬ್ರಿ ಮಸೀದಿಯನ್ನು ಕೆಡವಿದರು. ಇದರಿಂದ ದೇಶಾದ್ಯಂತ ಸಾಕಷ್ಟು ಹಿಂಸಾಚಾರಗಳು ನಡೆದವು. ಇನ್ನು, ಪ್ರತೀ ವರ್ಷವೂ ಅಯೋಧ್ಯೆ ಬಾಬ್ರಿ ಮಸೀದಿ ಧ್ವಂಸ ಮಾಡಿದ ದಿನವನ್ನು ವಿಶ್ವ ಹಿಂದು ಪರಿಷತ್, ಬಜರಂಗದಳ ಸೇರಿದಂತೆ ಅನೇಕ ಹಿಂದೂ ಸಂಘಟನೆಗಳು `ಶೌರ್ಯದ ದಿನ’ ಎಂದು ಆಚರಣೆ ಮಾಡುತ್ತವೆ. ಅಂತೆಯೇ ಇನ್ನೊಂದೆಡೆ ಈ ದಿನವನ್ನು `ಕಪ್ಪು ದಿನ’ ಎಂದು ಮುಸ್ಲಿಂ ಸಂಘಟನೆಗಳು ಬೀದಿಗಿಳಿಯುತ್ತವೆ.

ಆದ್ದರಿಂದ ಯಾವುದೇ ಅನಾಹುತ ಸಂಭವಿಸಿದಂತೆ ತಡೆಯಲು ದೇಶಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅಯೋಧ್ಯೆ ಸೇರಿದಂತೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುತ್ತದೆ.