Monday, November 18, 2024
ಹೆಚ್ಚಿನ ಸುದ್ದಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ – ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟ-ಕಹಳೆ ನ್ಯೂಸ್

ಲಖನೌ, ಸೆ.30 (ಹಿ.ಸ) : ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪು ಇಂದು ಪ್ರಕಟವಾಗಲಿದೆ. ಭಾರತೀಯ ಜನತಾಪಕ್ಷದ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಭವಿಷ್ಯ ನಿರ್ಧಾರವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲಾ ಆರೋಪಿಗಳು ಈ ವೇಳೆ ಹಾಜರಿ ಇರಬೇಕೆಂದು ವಿಶೇಷ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ, ಕೋವಿಡ್ ಹಿನ್ನಲೆಯಲ್ಲಿ ಇವರು ಯಾರು ಕೂಡ ಹಾಜರಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಅಡ್ವಾಣಿ ಹಾಗು ಜೋಷಿ ಅವರಿಗೆ ವಯಸ್ಸಾಗಿದ್ದು ಅವರಿಗೆ ವಿನಾಯಿತಿ ನೀಡುವ ಸಾಧ್ಯತೆಯಿದೆ. ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಅನಾರೋಗ್ಯ ಪೀಡಿತರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಈ ಪ್ರಕರಣದ ಅಂತಿಮ ತೀರ್ಪನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಎಲ್ಲಾ 32 ಆರೋಪಿಗಳು ಖುದ್ದು ಹಾಜರಿರಬೇಕೆಂದು ನ್ಯಾಯಾಲಯ ತಿಳಿಸಿದೆ. ಸಿಸಿಬಿ ವಿಶೇಷ ಕೋರ್ಟ್​ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವು 28 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ.

ಸೆಪ್ಟೆಂಬರ್ 1 ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗು ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.