Sunday, January 19, 2025
ರಾಷ್ಟ್ರೀಯಸುದ್ದಿ

Breaking News : `ಬಾಬ್ರಿ ಮಸೀದಿ ಧ್ವಂಸ’ ಪ್ರಕರಣ : ಎಲ್.ಕೆ. ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿಗಳು ; ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ.? – ಕಹಳೆ ನ್ಯೂಸ್

ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ.

ಲಕ್ನೋದ ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು ಪಡಿಸಲು ಪ್ರಬಲ ಸಾಕ್ಷ್ಯಗಳು ಇಲ್ಲ. ಎಲ್ಲಾ 32 ಆರೋಪಿಗಳು ನಿರ್ದೋಷಿಗಳು ಎಂದು ಆದೇಶ ಪ್ರಕಟಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ ಹಿನ್ನೆಲೆ :

ಜಾಹೀರಾತು
ಜಾಹೀರಾತು
ಜಾಹೀರಾತು

ಮೊಘಲರ ಕಾಲದಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕಟ್ಟಲಾಗಿತ್ತು. ನಂತರ ಅಲ್ಲಿ ರಾಮ ಮಂದಿರ ಕೆಡವಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಹಿಂದುಗಳು ಆರೋಪಿಸಿದ್ದರು. 1984ರಲ್ಲಿ ವಿಶ್ವ ಹಿಂದು ಪರಿಷತ್ ಆಂದೋಲನ ಶುರುಮಾಡಿತು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ಕರಸೇವಕರು ಬಾಬ್ರಿ ಮಸೀದಿಯನ್ನು ಕೆಡವಿದರು.

ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಮತ್ತಿತರ 48 ಮಂದಿ ಸೇರಿ ಸಂಚುರೂಪಿಸಿ ಭೂವಿವಾದ ವಿಚಾರಣೆಯ ಹಂತದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿಯನ್ನು ಕೆಡವಿದ್ದಾರೆ ಎಂದು ದೂರು ದಾಖಲಿಸಲಾಯಿತು. ಈ 48 ಆರೋಪಿಗಳ ಪೈಕಿ 17 ಮಂದಿ ಸಾವನ್ನಪ್ಪಿದ್ದಾರೆ. ಈಗ ಬದುಕಿರುವುದು 32 ಆರೋಪಿಗಳು ಮಾತ್ರ.ಇಂದು ಪ್ರಕಟವಾಗುವ ತೀರ್ಪಿನಲ್ಲಿ ಈ 32 ಜನರ ಭವಿಷ್ಯ ಪ್ರಕಟವಾಗಲಿದೆ.