Recent Posts

Sunday, January 19, 2025
ಹೆಚ್ಚಿನ ಸುದ್ದಿ

ಪ್ರಧಾನಿ ಮೋದಿಯಿಂದ ವಿಶ್ವದ ಅತಿ ಉದ್ದನೆಯ ಹೆದ್ದಾರಿ ಸುರಂಗ ‘ಅಟಲ್​ ಟನಲ್’ ಲೋಕಾರ್ಪಣೆ-ಕಹಳೆ ನ್ಯೂಸ್

ನವದೆಹಲಿ : ಮನಾಲಿಯನ್ನು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಯೊಂದಿಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

ಭಾರೀ ಹಿಮಪಾತದ ಮಧ್ಯೆ ಪ್ರತಿವರ್ಷ ಆರು ತಿಂಗಳ ಕಾಲ ಕಣಿವೆಯನ್ನು ನಿರ್ಬಂಧಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಸುರಂಗವನ್ನು ನಿರ್ಮಾಣ ಮಾಡಲಾಗಿದ್ದು, ಇದರಿಂದ ಜನರಿಗೆ ಅನುಕೂಲವಾಗಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು

ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಎಂಒಎಸ್ ಅನುರಾಗ್ ಸಿಂಗ್ ಠಾಕೂರ್ ಮತ್ತು ಡಿಜಿ ಬಿಆರ್‌ಒ ಲೆಫ್ಟಿನೆಂಟ್ ಜನರಲ್ ಹರ್ಪಾಲ್ ಸಿಂಗ್ ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಜಿ ಪ್ರಧಾನಿ ಅಟಲ್ ಬಿಹಾರ ವಾಜಪೇಯಿ ಅವರ ಹೆಸರಿನ ಅಟಲ್ ಟನಲ್, ಮನಾಲಿ ಮತ್ತು ಲೇಹ್ ನಡುವಿನ ರಸ್ತೆ ದೂರವನ್ನು 46 ಕಿ.ಮೀ ಮತ್ತು ಪ್ರಯಾಣದ ಸಮಯವನ್ನು ಸುಮಾರು ನಾಲ್ಕರಿಂದ ಐದು ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3,000 ಮೀಟರ್ ಎತ್ತರದಲ್ಲಿ ಅಲ್ಟ್ರಾ-ಆಧುನಿಕ ವಿಶೇಷಣಗಳೊಂದಿಗೆ ಸುರಂಗವನ್ನು ನಿರ್ಮಿಸಲಾಗಿದೆ.