Saturday, November 16, 2024
ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ತಂತ್ರಜ್ಞಾನ ಮಾಹಿತಿ ತರಬೇತಿ-2020 ಕಾರ್ಯಕ್ರಮದ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು: ಕಲಿಕೆ ಒಂದು ನಿರಂತರ ಕ್ರಿಯೆ. ಸಮಯಕ್ಕೆ ಹೆಚ್ಚು ಮಹತ್ವವನ್ನು ನೀಡಬೇಕು. ಪ್ರತಿಯೊಬ್ಬ ಅಧ್ಯಾಪಕನು ಶ್ರೇಷ್ಠತೆಯ ಹಾದಿಯಲ್ಲಿ ಮುನ್ನಡೆಯಲು ಆ ಬಗೆಗೆ ನಮ್ಮನ್ನು ನಾವು ಜಾಗೃತಾವಸ್ಥೆಯಲ್ಲಿಟ್ಟುಕೊಳ್ಳಲು ತರಬೇತಿ ಕಾರ್ಯಾಗಾರಗಳು ಸಹಾಯ ಮಾಡುತ್ತವೆ ಎಂದು ಹರ್ಮನ್ ಕನೆಕ್ಟೆಡ್ ಸರ್ವೀಸ್ನ ಹಿರಿಯ ಸಾಪ್ಟ್ವೇರ್ ಇಂಜಿನಿಯರ್ ಅಕ್ಷತಾ ಭಟ್ ಟಿ.ಪಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಿಗೆ ಏರ್ಪಡಿಸಿದ ತಂತ್ರಜ್ಞಾನ ಆಧಾರಿತ ಮಾಹಿತಿ ತರಬೇತಿ ಕಾರ್ಯಕಮವನ್ನು ಉದ್ಘಾಟಿಸಿ ಮಾತನಾಡುತ್ತ, ವಿದ್ಯಾರ್ಥಿಗಳಿಗೆ ಬೋಧಿಸಿದ ವಿಚಾರಗಳು ವಿದ್ಯಾರ್ಥಿಗಳ ದೈನಂದಿನ ಬದುಕಿನಲ್ಲಿ ಉಪಯೋಗವಾಗುವಂತಾಗಬೇಕು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣಭಟ್ ಮಾತನಾಡಿ ಶಿಕ್ಷಣವೆಂದರೆ ಬರೇ ಮಾಹಿತಿಯನ್ನು ಪೇರಿಸುವ ಕ್ರಿಯೆಯಲ್ಲ. ವಿದ್ಯಾರ್ಥಿಗಳಲ್ಲಿ ಈಗಾಗಲೇ ಇರುವಂಥ ಸತ್ವವನ್ನು ಅರಳಿಸುವ ಪ್ರಕ್ರಿಯೆ ಎಂದರು.