Recent Posts

Monday, January 20, 2025
ಸುದ್ದಿ

ಸಂಸದ ಡಿಕೆ ಸುರೇಶ್​ಗೆ ಕೊರೋನಾ ದೃಢ; ಸಿಬಿಐ ಅಧಿಕಾರಿಗಳ ತಪಾಸಣೆಗೆ ಮನವಿ-ಕಹಳೆ ನ್ಯೂಸ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸಿಬಿಐ ಡಿ.ಕೆ.ಸುರೇಶ್​ ಅವರ ಮನೆಯ ಮೇಲೆ ದಾಳಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ತಮಗೆ ಕರೊನಾ ಪಾಸಿಟಿವ್​ ಬಂದಿರುವುದಾಗಿ ಸುರೇಶ್​ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಟ್ವೀಟ್​ ಮಾಡಿರುವ ಅವರು, ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಹಾಗೂ ಕೆಲವು ಪತ್ರಕರ್ತರು ಅವರ ಅತ್ಯಂತ ಸಮೀಪ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಎಲ್ಲರಲ್ಲಿಯೂ ಇದೀಗ ಆತಂಕ ಶುರುವಾಗಿದೆ.ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಡಿಕೆ ಸುರೇಶ್ ಅವರ ಅಣ್ಣ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿದ್ದಾರೆ.