Recent Posts

Monday, January 20, 2025
ಸುದ್ದಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ ;ಪ್ರಯಾಣಿಕರ ಆಕ್ರೋಶ– ಕಹಳೆ ನ್ಯೂಸ್

ದಕ್ಷಿಣ ಕನ್ನಡ:ಬೆಂಗಳೂರು – ಮಂಗಳೂರು ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು , ಬೆಂಗಳೂರು – ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ವಾರದಲ್ಲಿ 4 ದಿನ ಸಂಚರಿಸುತ್ತಿದ್ದ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಅಕ್ಟೋಬರ್ 7 ರಿಂದ ಸ್ಥಗಿತಗೊಳಿಸಲಾಗಿದೆ. ಮಂಗಳೂರು ಸೆಂಟ್ರಲ್-ಬೆಂಗಳೂರು ನಡುವಿನ ಸಂಚಾರ ಅಕ್ಟೋಬರ್ 11 ರಿಂದ ಸ್ಥಗಿತಗೊಳ್ಳಲಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ. ಕೂಡಲೇ ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿದ್ದಾರೆ.