Recent Posts

Sunday, November 17, 2024
ಸುದ್ದಿ

BREAKING NEWS : ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್ ಧರಿಸದೇ ಇದ್ರೇ.. ನಗರ ಪ್ರದೇಶದಲ್ಲಿ ರೂ.250, ಗ್ರಾಮೀಣ ಪ್ರದೇಶದಲ್ಲಿ ರೂ.100 ದಂಡ – ಸಿಎಂ ಯಡಿಯೂರಪ್ಪ ಆದೇಶ-ಕಹಳೆ ನ್ಯೂಸ್

ಬೆಂಗಳೂರು : ಕಳೆದ ಮೂರು ದಿನಗಳ ಹಿಂದಷ್ಟೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸದೇ ಇದ್ದರೇ ಭಾರೀ ಮೊತ್ತದ ದಂಡ ವಿಧಿಸಲಾಗುತ್ತದೆ. ನಗರ ಪ್ರದೇಶದಲ್ಲಿ ರೂ.1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ಹಾಕಲಾಗುತ್ತದೆ ಎಂಬುದಾಗಿ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದನ್ನು ಅಧಿಕೃತವಾಗಿಯೂ ರಾಜ್ಯ ಸರ್ಕಾರ ಜಾರಿ ಮಾಡಿತ್ತು. ಆದ್ರೇ ದುಬಾರಿ ದಂಡದಿಂದಾಗಿ ರಾಜ್ಯದ ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಸಿಕ್ಕಿಬಿದ್ದರೇ ರೂ.1000 ದಂಡದ ಮೊತ್ತವನ್ನು ರೂ.250ಕ್ಕೆ, ಗ್ರಾಮೀಣ ಪ್ರದೇಶದಲ್ಲಿನ ರೂ.500 ಮೊತ್ತವನ್ನು ರೂ.100ಕ್ಕೆ ಇಳಿಕೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಕಟಣೆ ಹೊರಡಿಸಿದ್ದು, ಇತ್ತೀಚೆಗೆ ರಾಜ್ಯ ಸರ್ಕಾರವು ನಗರ ಪ್ರದೇಶದಲ್ಲಿ ಮಾಸ್ಕ್ ಬಳಸದಿದ್ದರೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ವಿಧಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು.
ಆದ್ರೇ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನಲೆಯಲ್ಲಿ ದಂಡದ ಪ್ರಮಾಣದಲ್ಲಿ ನಗರ ಪ್ರದೇಶದಲ್ಲಿ ರೂ.1000 ದಿಂದ ರೂ.250 ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500ರಿಂದ ರೂ.100ಕ್ಕೆ ಇಳಿಸಲು ತೀರ್ಮಾನಿಸಲಾಗಿರುತ್ತದೆ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು