ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ಬೆಳಗ್ಗೆ ಶೂಟೌಟ್ ನಡೆದಿದ್ದು, ಜನತೆಯನ್ನು ಬೆಚ್ಚಿ ಬೀಳಿಸಿದೆ.
ಸುಳ್ಯದ ಶಾಂತಿನಗರದಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವರಿಗೆ ಕಾರಿನಲ್ಲಿ ಬಂದ ಅಪರಿಚಿತರು ಗುಂಡಿಕ್ಕಿದ್ದಾರೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳು ವರ್ಷದ ಹಿಂದೆ ನಡೆದ ಸಂಪಾಜೆಯ ಕಳಗಿ ಬಾಲಚಂದ್ರರ ಕೊಲೆ ಪ್ರಕರಣದ ಆರೋಪಿ ಎಂದೂ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.