Monday, November 18, 2024
ಸುದ್ದಿ

ವಿವೇಕಾನಂದ ಕಾಲೇಜ್‍ನಲ್ಲಿ ತಂತ್ರಜ್ಞಾನ ಆಧಾರಿತ ಮಾಹಿತಿ ತರಬೇತಿ ಕಾರ್ಯಗಾರ-ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುವ ಮತ್ತು ಪ್ರತಿಭೆಯನ್ನು ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರದ್ದು, ವೇಗವಾಗಿ ಆಲೋಚನೆ ಮಾಡಬಲ್ಲ ವಿದ್ಯಾರ್ಥಿಗಳ ನಡುವೆ ಅವರ ವೇಗದ ಗತಿಗೆ ತಕ್ಕಂತಹ ವೇಗವನ್ನು ಸಾಧಿಸಬೇಕಿದೆ ಎಂದು ಇಂಜಿನಿಯರಿಂಗ್‍ನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿನಿ ಕು. ಸಿಂಧೂರ ಸರಸ್ವತಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಉಪನ್ಯಾಸಕರುಗಳಿಗೆ ಆಯೋಜಿಸಲಾಗಿರುವ ತಂತ್ರಜ್ಞಾನ ಆಧಾರಿತ ಮಾಹಿತಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಶಿಕ್ಷಣ ಕ್ಷೇತ್ರ ನಿರಂತರ ಬದಲಾವಣೆಯ ಕ್ಷೇತ್ರವಾಗಿದೆ ಹೀಗಾಗಿ ಬದಲಾವಣೆಗಳನ್ನು ಇರಿಸಿಕೊಂಡು ಕೆಲಸ ಮಾಡುವುದರ ಜೊತೆಗೆ ಅಧ್ಯಾಪಕನು ಶ್ರೇಷ್ಠತೆ ಹಾದಿಯಲ್ಲಿ ಮುನ್ನಡೆಯಲು ಮತ್ತು ತಮ್ಮನ್ನು ಜಾಗೃತಾವಸ್ಥೆಯಲ್ಲಿಟ್ಟುಕೊಳ್ಳಲು ಈ ಬಗೆಯ ತರಬೇತಿ ಕಾರ್ಯಾಗಾರಗಳು ಸಹಾಯ ಮಾಡುತ್ತವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ವತ್ಸಲಾರಾಜ್ಞಿ , 2019-20 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡುವ ವೇದಿಕೆಯಾದ ಕಾಲೇಜಿನ ಚಿಗುರು ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಿದರು.

ಈ ವೇಳೆ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ, ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಹರ್ಷಿತಾ ಮತ್ತು ವಾಣಿಜ್ಯ ವಿಭಾಗದ ಶ್ರೀಧರ ಶೆಟ್ಟಿಗಾರ್ ಕಾರ್ಯಾಗಾರದಲ್ಲಿ ತಮಗೆ ಆದ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕ ಶ್ರೀಪತಿ ಸ್ವಾಗತಿಸಿ ದಯಾಮಣಿ ವಂದಿಸಿದರು.