Monday, November 18, 2024
ಹೆಚ್ಚಿನ ಸುದ್ದಿ

‘ಅಕ್ಟೋಬರ್ 16’ ರವರೆಗೆ ಶಾಲಾ ದಾಖಲಾತಿ ವಿಸ್ತರಿಸಿ ‘ರಾಜ್ಯ ಸರ್ಕಾರ’ದಿಂದ ಆದೇಶ-ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಗಾಗಿ ನೀಡಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಯನ್ನು ಸೆಪ್ಟೆಂಬರ್ 30 ರವರೆಗೆ ಪೂರ್ಣಗೊಳಿಸಲು ಅವಕಾಶ ನೀಡಲಾಗಿತ್ತು. ಇದೀಗ ದಾಖಲಾತಿಗೆ ನೀಡಲಾಗಿದ್ದ ಕಾಲಾವಕಾಶವನ್ನು ಅಕ್ಟೋಬರ್ 16 ರವರೆಗೆ ವಿಸ್ತರಿಸಿದೆ.