ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಗೆ ಬರುವವರಿಗೆ ಕೋವಿಡ್ 19 ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಗೃಹ ಕಚೇರಿ ಕೃಷ್ಣಾ ಅಥವಾ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಬರುವ ಜನರಿಗೆ ಆಂಟಿಜೆನ್ ಟೆಸ್ಟ್ ಮಾಡಲಾಗುತ್ತದೆ. ವರದಿ ನೆಗೆಟಿವ್ ಬಂದರೆ ಮಾತ್ರ ಸಿಎಂ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಕೊರನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯದ ದೃಷ್ಟಿಯಿಂದ ಸಿಎಂ ಭೇಟಿಗೆ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ.